ಈ ಹಿಂದೆ ಅಲೋಕ್ ಕುಮಾರ್ ಮತ್ತು ಗಿರೀಶ್ ಅವರಂತಹ ಖಡಕ್ ಪೊಲೀಸ್ ಅಧಿಕಾರಿಗಳನ್ನು ಸಿಸಿಬಿಗೆ ಹಾಕಿ, ದಂಧೆಕೋರರಿಗೆ ಬಿಸಿ ಮುಟ್ಟಿಸಿದ್ದ ರಾಜ್ಯ ಸರ್ಕಾರ ಇದೀಗ ಸಿಲಿಕಾನ್ ಸಿಟಿ ಭೂಮಾಫಿಯ ದಂಧೆಗೆ ಶಾಕ್ ನೀಡವು ಇಂತಹ ಕ್ರಮಕ್ಕೆ ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಚಿಕ್ಕಮಗಳೂರು ಜಿಲ್ಲಾ ಎಸ್ಪಿಯಾಗಿದ್ದ ಕೆ. ಅಣ್ಣಾಮಲೈ ಅವರನ್ನ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ವಿಭಾಗದ ಹೆಚ್ಚುವರಿ ಸಂಚಾರ ಆಯುಕ್ತರಾಗಿ ಹರಿಶೇಖರನ್, ಕೆಎಸ್‍ಆರ್ ಪಿ 1ನೇ ಬೆಟಾಲಿಯನ್ ಕಮಾಂಡೆಂಟ್‍ಗೆ ಅಜಯ್ ಹಿಲೋರಿ ಹಾಗೂ ಚಿಕ್ಕಮಗಳೂರು ಎಸ್ ಪಿಯಾಗಿ ಹರೀಶ್ ಪಾಂಡೆ ಅವರು ವರ್ಗಾವಣೆಯಾಗಿದ್ದಾರೆ.