ಬೆಂಗಳೂರು: ವಿದ್ಯುತ್ ಹರಿದು ಲೈನ್'ಮ್ಯಾನ್ ಸಾವು- ಪ್ರತಿಭಟನೆ

ವಿದ್ಯುತ್ ಕಂಬ ಹತ್ತಿ ದುರಸ್ತಿ ಕಾರ್ಯ ನಡೆಸುತ್ತಿದ್ದ ಬೆಸ್ಕಾಂ ಲೈನ್ ಮ್ಯಾನ್ ಒಬ್ಬರಿಗೆ ವಿದ್ಯುತ್ ಹರಿದು ಮೃತಪಟ್ಟಿರುವ ಘಟನೆ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿ ಮಂಗಳವಾರ ನಡೆದಿದೆ...
ಬೆಂಗಳೂರು: ವಿದ್ಯುತ್ ಹರಿದು ಲೈನ್'ಮ್ಯಾನ್ ಸಾವು- ಪ್ರತಿಭಟನೆ
ಬೆಂಗಳೂರು: ವಿದ್ಯುತ್ ಹರಿದು ಲೈನ್'ಮ್ಯಾನ್ ಸಾವು- ಪ್ರತಿಭಟನೆ
Updated on
ಬೆಂಗಳೂರು: ವಿದ್ಯುತ್ ಕಂಬ ಹತ್ತಿ ದುರಸ್ತಿ ಕಾರ್ಯ ನಡೆಸುತ್ತಿದ್ದ ಬೆಸ್ಕಾಂ ಲೈನ್ ಮ್ಯಾನ್ ಒಬ್ಬರಿಗೆ ವಿದ್ಯುತ್ ಹರಿದು ಮೃತಪಟ್ಟಿರುವ ಘಟನೆ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿ ಮಂಗಳವಾರ ನಡೆದಿದೆ. 
ಕುಣಿಕಲ್ ನಿವಾಸಿಯಾಗಿರುವ ಪ್ರದೀಪ್ (27) ಸಾವನ್ನಪ್ಪಿರುವ ವ್ಯಕ್ತಿಯಾಗಿದ್ದಾರೆ. ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ಲಕ್ಷ್ಮೀ ಗೋಲ್ಡ್ ಖಜಾನ ಸಮೀಪ ನಿನ್ನೆ ಬೆಳಿಗ್ಗೆ 11.30 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. 
ವಿದ್ಯುತ್ ಕಂಬ ಹತ್ತಿ ದುರಸ್ತಿ ಕಾರ್ಯ ನಡೆಸುತ್ತಿದ್ದ ಪ್ರದೀಪ್ ಅವರಿಗೆ ಇದ್ದಕ್ಕಿದ್ದಂತೆ ವಿದ್ಯುತ್ ಹರಿದಿದೆ. ನಿತ್ರಾಣಗೊಂಡಿದ್ದ ಪ್ರದೀಪ್ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 
ಘಟನೆ ಬಳಿಕ ಸ್ಥಳಕ್ಕಾಗಮಿಸಿದ ಹಿರಿಯ ಅಧಿಕಾರಿಗಳು ಹೇಳಿಕೆ ನೀಡಿದ್ದು, ದುರಸ್ತಿ ಕಾರ್ಯ ನಡೆಸುವ ವೇಳೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪ್ರಕರಣ ಸಂಬಂಧ ತನಿಖೆಗೆ ಅಧಿಕಾರಿಯೊಬ್ಬರನ್ನು ನೇಮಿಸಿ ಸಾವಿಗೆ ಪ್ರಮುಖ ಕಾರಣಗಳನ್ನು ತಿಳಿದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. 
ಮಗನ ಸಾವಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪ್ರದೀಪ್ ಅವರ ತಂದೆ ಬೆಸ್ಕಾಂ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com