ಅಕ್ಟೋಬರ್ 19 ಶುಕ್ರವಾರ ಮಧ್ಯಾಹ್ನ 2.30ರಿಂದ 3.15 ರವರೆಗೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಅರಮನೆ ಬಲರಾಮದ್ವಾರದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಯಧುವೀರ್ ಚಾಮರಾಜ ಒಡೆಯರ್ ಕೂಡ ಹಾಜರಿರಲಿದ್ದಾರೆ.ದಸರಾ ಗಜಪಡೆಯ ಕ್ಯಾಪ್ಟನ್ ಅರ್ಜುನ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಹೊತ್ತು ತರುವ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.