ರಾಜಮಾತೆ ಪ್ರಮೋದಾದೇವಿ ಒಡೆಯರ್ ತಾಯಿ ವಿಧಿವಶ: ಸಿಎಂ ಕುಮಾರಸ್ವಾಮಿ ತೀವ್ರ ಸಂತಾಪ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ತಾಯಿ ವಿಧಿವಶರಾಗಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ತೀವ್ರ ಸಂತಾಪ ಸೂಚಿಸಿದ್ದಾರೆ...
ಮೈಸೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ತಾಯಿ ವಿಧಿವಶರಾಗಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸಂತಾಪ ಸೂಚಿಸಿರುವ ಅವರು, ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರ ಮಾತೃಶ್ರೀ ಪುಣ್ಣಚಿನ್ನಮ್ಮಣ್ಣಿ ನಿಧನದ ಸುದ್ದಿ ಕೇಳಿ ಬಹಳ ನೋವಾಗಿದೆ. ಅವರ ನಿಧನಕ್ಕೆ ಸಂತಾಪ ಸೂಚಿಸುತ್ತೇನೆಂದು ಹೇಳಿದ್ದಾರೆ.
ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರ ಮಾತೃಶ್ರೀ ಪುಟ್ಟಚಿನ್ನಮ್ಮಣ್ಣಿ ನಿಧನದ ಸುದ್ದಿ ಕೇಳಿ ದುಖ: ಉಂಟಾಗಿದೆ. ಅವರ ನಿಧನಕ್ಕೆ ಸಂತಾಪ ಸೂಚಿಸುತ್ತೇನೆ.
ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ತಾಯಿ ಚಾಮುಂಡೇಶ್ವರಿ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಪ್ರಮೋದಾದೇವಿಯವರ ತಾಯಿಯವರನ್ನು ಮೈಸೂರಿನ ಶಾಂತವೇರಿ ಗೋಪಾಲಗೊಡ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ.
ಚಿನ್ನಮ್ಮಣ್ಣಿಯವರು ನಿಧನದಿಂದಾಗಿ ಖಾಸಗಿ ದರ್ಬಾರ್ ಸಂಭ್ರಮದ ಹಾಗೂ ಮೈಸೂರಿನ ದಸರಾದ ಹಲವು ಸಾಂಪ್ರದಾಯಿಕ ಕಾರ್ಯಕ್ರಮಗಳ ಮೇಲೆ ಸೂತಕದ ಛಾಯೆ ಬಿದ್ದಂತಾಗಿದೆ.