ಅ.16ರಂದು ಹಾಲಿ ಕಾರ್ಯ ನಿರ್ವಹಣಾಧಿಕಾರಿ ಹಾಲಪ್ಪನವರ ಅನುಮತಿ ಇಲ್ಲದೆ ಗರ್ಭಗುಡಿಯೊಳಕ್ಕೆ ಪ್ರವೇಶಿಸಿದ್ದಾರೆ. ಇದು ಶಿಷ್ಟಾಚಾರಕ್ಕೆ ವಿರುದ್ದವಾಗಿದ್ದು, ಭಕ್ತರ ಭಾವನೆಯೊಂದಿಗೆ ಅವರು ಆಟವಾಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ವಿಷಯ ಸಂಬಂಧ ವರದಿ ನೀಡುವಂತೆ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉಪ ವಿಭಾಗಾಧಿಕಾರಿಗೆ ಸೂಚಿಸಿದ್ದಾರೆ.