ಬೆಂಗಳೂರು: ಹೊಸ ಬೈಕ್ ಕೊಂಡ ಖುಷೀಲಿ ಜಾಲಿ ರೈಡ್ ವೇಳೆ ಪೊಲೀಸ್ ಚೌಕಿಗೆ ಡಿಕ್ಕಿ ಹೊಡೆದು ಯುವಕ ಸಾವು

Published On :
ಬೆಂಗಳೂರು: ಜಾಲಿರೈಡ್'ಗೆ ಹೋಗುತ್ತಿದ್ದ ವೇಳೆ ಪೊಲೀಸ್ ಚೌಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟು, ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೈಗ್ರೌಂಡ್ಸ್ ಸಂಚಾರ ಠಾಣಾ ವ್ಯಾಪ್ತಿಯ ವಿಂಡ್ಸರ್ ಮ್ಯಾನರ್ ಹೋಟೆಲ್ ಸಮೀಪ ಶನಿವಾರ ರಾತ್ರಿ ನಡೆದಿದೆ.
ಹೆಬ್ಬಾಳ ನಿವಾರಿ ಶರಣ್ (23) ಮೃತ ಯುವಕನಾಗಿದ್ದಾನೆ. ಘಟನೆಯಲ್ಲಿ ಶರಣ್ ಸ್ನೇಹಿತ ಲಿವಿಂಗ್'ಸ್ಟನ್ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಪೊಲೀಸರು ಹೇಳಿದ್ದಾರೆ.
ಮೂಲತಃ ತಮಿಳುನಾಡಿನ ಶರಣ್ ಮಾರತ್ ಹಳ್ಳಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ರೆಡಿಯೋಲಜಿಸ್ಟ್ (ವಿಕಿರಣ ತಜ್ಞ)ಆಗಿ ಕೆಲಸ ನಿರ್ವಹಿಸುತ್ತಿದ್ದರು. ಹೊಸ ಪಲ್ಸರ್ ಬೈಕ್ ಖರೀಸಿದಿದ್ದ ಶರಣ್ ಶನಿವಾರ ರಾತ್ರಿ ಹೆಬ್ಬಾಳದಿಂದ ಸ್ನೇಹಿತನ ಜೊತೆಗೆ ಜಾಲಿ ರೈಡ್ ಹೊರಟಿದ್ದರು.
ತಡರಾತ್ರಿ 1.45ರ ಸುಮಾರಿಗೆ ವೇಗವಾಗಿ ಬೈಕ್ ಚಾನೆ ಮಾಡುತ್ತಾ ಬಂದಿದ್ದು, ನಿಯಂತ್ರಣ ತಪ್ಪಿ ವಿಂಡ್ಸರ್ ಮ್ಯಾನರ್ ಹೋಟೆಲ್ ಬಳಿಯಿರುವ ಪೊಲೀಸ್ ಚೌಕಿಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಶರಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ಘಟನೆ ನಡೆದ ವೇಳೆ ಇಬ್ಬರೂ ಹೆಲ್ಮೆಟ್ ಧರಿಸಿರಲಿಲ್ಲ. ವೇಗವಾಗಿ ಬೈಕ್ ಚಾಲನೆ ಮಾಡಿದ ಪರಿಣಾಮ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


