ಕಲ್ಲಿದ್ದಲು ಕೊರತೆ: ಬೆಂಗಳೂರಿನಲ್ಲಿ ನಿತ್ಯ 1 ಗಂಟೆ ಲೋಡ್ ಶೆಡ್ಡಿಂಗ್ ಸಾಧ್ಯತೆ

ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರು...
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ನಿತ್ಯ 1 ಗಂಟೆ ಲೋಡ್ ಶೆಡ್ಡಿಂಗ್ ಆರಂಭವಾಗುವ ಸಾಧ್ಯತೆ ಇದೆ.
ಸ್ವತಃ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೇ ಮಂಗಳವಾರ ರಾಜ್ಯದಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯವಾಗುವ ಸುಳಿವು ನೀಡಿದ್ದು, ಕೇಂದ್ರ ನಮ್ಮ ಮನವಿಗೆ ಸ್ಪಂದಿಸಿ ಕಲ್ಲಿದ್ದಲನ್ನು ಸರಬರಾಜು ಮಾಡುತ್ತಿಲ್ಲ ಎಂದಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸೋಲಾರ್‌ ಉತ್ಪಾದಿತ ವಿದ್ಯುತನ್ನು ಹಗಲು ವೇಳೆಗೆ ಸರಬರಾಜು ಮಾಡಬಹುದು, ಆದರೆ ರಾತ್ರಿ ವೇಳೆ ಸರಬರಾಜು ಮಾಡಲು ಕಲ್ಲಿದ್ದಲಿನ ಕೊರತೆ ಕಂಡು ಬಂದಿದೆ. ಸದ್ಯ ಲೋಡ್‌ ಶೆಡ್ಡಿಂಗ್‌ ಬಗ್ಗೆ ಚಿಂತಿಸಿಲ್ಲ ಎಂದರು
ಕೇಂದ್ರ ಸರ್ಕಾರ ಸಾಕಷ್ಟ ಪ್ರಮಾಣದಲ್ಲಿ ಕಲ್ಲಿದ್ದಲು ಪೂರೈಕೆ ಮಾಡುತ್ತಿಲ್ಲ. ಹಿರಿಯ ಅಧಿಕಾರಿಗಳ ಜೊತೆ ವಿದ್ಯುತ್ ಸಮಸ್ಯೆ ಬಗ್ಗೆ ಚರ್ಚೆ ನಡೆಸಿದ್ದೇನೆ. ಬೆಂಗಳೂರಿನಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಕುರಿತು ಬುಧವಾರ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ ಲೋಡ್ ಶೆಡ್ಡಿಂಗ್ ಆರಂಭವಾಗಿದೆ. ಆದರೆ ಬೆಂಗಳೂರು ನಗರದಲ್ಲಿಯೂ ರಾತ್ರಿ ವೇಳೆ 1 ಗಂಟೆ ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾವನೆ ಬೆಸ್ಕಾಂ ಮುಂದಿದ್ದು, ನಾಳೆ ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com