ಕೇಂದ್ರದ ವಿದ್ಯುತ್ ಗ್ರಿಡ್ ನಿಂದ ಸಹ ರಾಜ್ಯಕ್ಕೆ ಸಮ ಪ್ರಮಾಣದಲ್ಲಿ ವಿದ್ಯುತ್ ಸರಬರಾಜಾಗುತ್ತಿಲ್ಲ. ಸೋಲಾರ್ ಮತ್ತು ಹೈಡ್ರೋ ಪವರ್ ಆಧರಿಸಿ ಲೋಡ್ ಶೆಡ್ಡಿಂಗ್ ಇಲ್ಲದೆ ರಾಜ್ಯದಲ್ಲಿ ವಿದ್ಯುತ್ ಸರಬರಾಜು ಮಾಡಬೇಕೆಂದು ಬೆಸ್ಕಾಂ, ಜೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ ವಿಭಾಗಕ್ಕೆ ಕುಮಾರಸ್ವಾಮಿಯವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.