2 ದಿನದಲ್ಲಿ ಬೆಂಗಳೂರು ಗುಂಡಿ ಮುಕ್ತವಾಗಬೇಕು: ಬಿಬಿಎಂಪಿಗೆ ಡಿಸಿಎಂ ಆದೇಶ

ಎರಡು ದಿನಗಳಲ್ಲಿ ಬೆಂಗಳೂರು ನಗರವನ್ನು ಗುಂಡಿ ಮುಕ್ತಗೊಳಿಸಬೇಕು ಎಂದು ಉಪ ಮುಖ್ಯಮಂತ್ರಿ....
ಜಿ ಪರಮೇಶ್ವರ
ಜಿ ಪರಮೇಶ್ವರ
ಬೆಂಗಳೂರು: ಎರಡು ದಿನಗಳಲ್ಲಿ ಬೆಂಗಳೂರು ನಗರವನ್ನು ಗುಂಡಿ ಮುಕ್ತಗೊಳಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಅವರು ಗುರುವಾರ ಬಿಬಿಎಂಪಿ  ಅಧಿಕಾರಿಗಳಿಗೆ ಸೂಚಿಸಿದ್ದಾರೆ. 
ಇಂದು ವಿಕಾಸಸೌಧದಲ್ಲಿ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ,  ಬಿಬಿಎಂಪಿ ಆಡಳಿತದ ಬಗ್ಗೆ ಹೈಕೋರ್ಟ್‌ ನ್ಯಾಯಾದೀಶರು ಲೋಪದೋಷವನ್ನು ಎತ್ತಿಹಿಡಿದು, ಕಟುವಾಗಿ ಸೂಚನೆ ನೀಡಿದ್ದಾರೆ‌. ಗುಂಡಿ ಮುಚ್ಚಲು ಗಡುವು ನೀಡಿದ್ದು, ಈ ಕುರಿತ ಅರ್ಜಿ ಶನಿವಾರ ಮತ್ತೆ ಚಾರಣೆಗೆ ಬರಲಿದೆ. ಅಷ್ಟರೊಳಗೆ ಎಲ್ಲ ಗುಂಡಿಗಳನ್ನು ಮುಚ್ಚುವಂತೆ ಎಂಟು ವಲಯ ಜಂಟಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದರು.
ಈ ಎಲ್ಲ ಮಾಹಿತಿಗಳನ್ನು ಬಿಬಿಎಂಪಿ ವೆಬ್‌ಸೈಟ್‌ನಲ್ಲಿಯು ಪ್ರಕಟಿಸಬೇಕು. ನಗರದ ಪ್ರತಿ ಬೀದಿಯ ರಸ್ತೆ ಗುಂಡಿ ಮುಚ್ಚಿರುವ ಮಾಹಿತಿ ಹಾಕಲಾಗುತ್ತದೆ. ಇದೇ ದಾಖಲೆಯನ್ನು ಹೈಕೋರ್ಟ್‌ಗೂ ಸಲ್ಲಿಸಲಾಗುವುದು.‌ ಈ ದಾಖಲೆ ತಪ್ತಪ್ಪಿದ್ದರೆ ಆಯಾ ವಲಯ ಜಂಟಿ ಆಯುಕ್ತರಿಗೆ ನೇರ ಕರೆ ಮಾಡಿ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ಹೇಳಿದ್ದಾರೆ. 
ಕಳೆದ ಎರಡು ವರ್ಷಗಳಿಂದ ಟೆಂಡರ್‌ ಶ್ಯೂರ್ ಹಾಗೂ ವೈಟ್‌ಟಾಪಿಂಗ್ ಯೋಜನೆ ಪ್ರಗತಿಯಲ್ಲಿದ್ದು, ಈ ಎರಡು ಯೋಜನೆಗಳು ಈ ವರ್ಷದ ಬೇಸಿಗೆಯ ಒಳಗಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಗಡುವು ನೀಡಲಾಗಿದೆ. 100 ಕಿ.ಮೀ. ನಷ್ಟು ರಸ್ತೆಗೆ ವೈಟ್‌ಟ್ಯಾಪಿಂಗ್‌ ಮಾಡಲು ಯೋಜಿಸಲಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com