ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ದೇವಸ್ಥಾನದ ಎದುರಿನ ಕಸವನ್ನು ಸ್ವಚ್ಛಗೊಳಿಸಲಾಗುವುದು. ಕಸದ ತೊಟ್ಟಿಯನ್ನು ಬೇರೆಡೆ ಸ್ಥಳಾಂತರಿಸಲು ಸ್ವಲ್ಪ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿಕೊಂಡರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಇಡೀ ಬೆಂಗಳೂರಿನ ಸ್ವಚ್ಛತೆಯ ಕುರಿತು ವಸ್ತುನಿಷ್ಠ, ಸಮರ್ಥನೀಯ ಕ್ರಮಗಳನ್ನು ಬಿಬಿಎಂಪಿ ಕೈಗೊಳ್ಳಲಿದೆ ಎಂದು ನಿರೀಕ್ಷಿಸುತ್ತೇವೆಂದು ಹೇಳಿ. ಅಕ್ಟೋಬರ್ 31ಕ್ಕೆ ವಿಚಾರಣೆಯನ್ನು ಮುಂದೂಡಿತು.