ರಾಜ್ಯದಲ್ಲಿ ವಿದ್ಯುತ್ ಕೊರತೆ ಇರುವುದು ನಿಜ: ಸಿಎಂ ಕುಮಾರಸ್ವಾಮಿ

ರಾಜ್ಯದಲ್ಲಿ ವಿದ್ಯುತ್ ಕೊರತೆ ಇರುವುದು ನಿಜ. ಆದರೆ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ...
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಕೊರತೆ ಇರುವುದು ನಿಜ. ಆದರೆ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ. 
ಇಂಧನ ಇಲಾಖೆ ಹಾಗೂ ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳೊಂದಿಗೆ ಪರಿಶೀಲನೆ ಹಾಗೂ ಮಂಡಳಿಯ ಸಾಮಾನ್ಯ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಲಿದ್ದಲು ಕೊರತೆ ಹಿನ್ನಲೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತದೆ ಎಂಬ ವರದಿಗಳನ್ನು ತಿರಸ್ಕರಿಸಿದ್ದಾರೆ. 
ಬೆಳಿಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹಾಗೂ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಅಗತ್ಯವಿರುವಷ್ಟು ವಿದ್ಯುತ್ ಲಭ್ಯವಿದೆ. ಆದರೆ, ಸಂಜೆ 5 ಗಂಟೆಯಿಂದ 10 ಗಂಟೆಯವರೆಗೆ 200-400 ಮೆಗಾವ್ಯಾಟ್ ಮಾತ್ರ ಕೊರತೆ ಇದೆ ಎಂದು ಹೇಳಿದ್ದಾರೆ. 
ಕಲ್ಲಿದ್ದಲು ಕೊರತೆ ಉಂಟಾಗಿದ್ದರೂ ವಿವಿಧ ಮೂಲಗಳಿಂದ ವಿದ್ಯುತ್ ಪಡೆದು ಲೋಡ್ ಶೆಡ್ಡಿಂಗ್ ಮಾಡದಂತೆ ಸೂಚಿಸಿದ್ದೇನೆ. ಜೊತೆಗ ಮುಂದಿನ ಏಪ್ರಿಲ್ ತಿಂಗಳವರೆಗೆ ಅಗತ್ಯವಾಗುವ ಐದು ಲಕ್ಷ ಟನ್ ಕಲ್ಲಿದ್ದಲನ್ನು ಜಾಗತಿಕ ಟೆಂಡರ್ ಮೂಲಕ ಖರೀದಿಸಲು ತೀರ್ಮಾನಿಸಲಾಗಿದೆ. 
ರಾಜ್ಯದಲ್ಲಿ ದೀಪಾವಳಿಗೆ ಮೊದಲೇ ಲೋಡ್ ಶೆಡ್ಡಿಂಗ್ ಉಡುಗೊರೆ ನೀಡಲು ಸಮ್ಮಿಶ್ರ ಸರ್ಕಾರ ಮುಂದಾಗಿದೆ ಎಂದೆಲ್ಲಾ ಅಪಪ್ರಚಾರ ಮಾಡಲಾಗುತ್ತಿದೆ. ಲೋಡ್ ಶೆಡ್ಡಿಂಗ್'ಗೆ ಈಗಾಗಲೇ ಆದೇಶ ಮಾಡಲಾಗೀದೆ ಎಂದು ಸುಳ್ಳು ಪ್ರಚಾರ ಮಾಡಲಾಗಿದೆ. ಆದರೆಸ ಸರ್ಕಾರದಿಂದ ಯಾವುದೇ ಲೋಡ್ ಶೆಡ್ಡಿಂಗ್ ತೀರ್ಮಾನವಾಗಿಲ್ಲ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com