ಹಿರಿಯ ಪತ್ರಕರ್ತ ವೈ ಎನ್ ಜೋಷಿ ನಿಧನ: ಮುಖ್ಯಮಂತ್ರಿ ಸಂತಾಪ

ನಾಡಿನ ಹಿರಿಯ ಪತ್ರಕರ್ತರಾದ ವೈ.ಎನ್.ಜೋಷಿ ನಿಧನಕ್ಕೆ ಮುಖ್ಯಮಂತ್ರಿ ...
ಸಿಎಂ ಹೆಚ್ ಡಿ ಕುಮಾರಸ್ವಾಮಿ(ಸಂಗ್ರಹ ಚಿತ್ರ)
ಸಿಎಂ ಹೆಚ್ ಡಿ ಕುಮಾರಸ್ವಾಮಿ(ಸಂಗ್ರಹ ಚಿತ್ರ)
Updated on: 

ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಅನೇಕ ವರ್ಷಗಳ ಕಾಲ ಪತ್ರಕರ್ತರಾಗಿ ನಿವೃತ್ತಿ ಹೊಂದಿದ್ದ ವೈ.ಎನ್.ಜೋಷಿ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಪತ್ರಿಕಾ ವೃತ್ತಿಯಲ್ಲಿ ವೃತ್ತಿಧರ್ಮಕ್ಕೆ ಅತ್ಯಂತ ಪ್ರಾಮುಖ್ಯ ನೀಡುತ್ತಿದ್ದ ಅವರು ಕಿರಿಯರಿಗೆ ಮಾರ್ಗದರ್ಶಕರಾಗಿದ್ದರು. ಇವರ ನಿಧನದಿಂದ ಪತ್ರಿಕೋದ್ಯಮ ಕ್ಷೇತ್ರದ ಹಿರಿಯ ಪೀಳಿಗೆಯ ಕೊಂಡಿಯೊಂದು ಕಳಚಿದಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com