ಬೆಂಗಳೂರು ಮೆಟ್ರೋ ರೈಲು ನಿಗಮದ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಮೆಟ್ರೋ 2ನೇ ಹಂತ 2020ರೊಳಗೆ ಮೈಸೂರು ರಸ್ತೆ, ತುಮಕೂರು ರಸ್ತೆ ಪೂರ್ಣಗೊಳ್ಳಲಿದೆ. ವೈಟ್ ಫೀಲ್ಡ್, ಆರ್'ವಿ ರಸ್ತೆ, ಬೊಮ್ಮಸಂದ್ರ ಮಾರ್ಗವು 2021ಕ್ಕೆ ಪೂರ್ಣಗೊಂಡರೆ, ಗೊಟ್ಟಿಗೆರೆ-ನಾಗವಾರ ಮಾರ್ಗ 2023ಕ್ಕೆ ಮುಗಿಯಲಿದೆ. ಈ ಹಂತಕ್ಕೆ ರೂ.26.405 ಕೋಟಿ ವೆಚ್ಚವಾಗಲಿದೆ. ಆದರೆ, ಕಾಮಗಾರಿ ಪೂರ್ಣಗೊಳ್ಳುವುದರೊಳಗೆ ರೂ.32 ಸಾವಿರ ಕೋಟಿ ತಲುಪಲಿದೆ ಎಂದು ಅಂದಾಜಿಸಲಾಗಿದೆ ಎಂದು ಹೇಳಿದ್ದಾರೆ.