ಬೆಂಗಳೂರಿನಲ್ಲಿ ಅನಂತ್ ಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಲಿದ್ದಾರೆ ರಾಜನಾಥ್ ಸಿಂಗ್

ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಸಂಜೆ ಬೆಂಗಳೂರಿಗೆ ಆಗಮಿಸುತ್ತಿದ್ದು...
ಅನಂತ್ ಕುಮಾರ್
ಅನಂತ್ ಕುಮಾರ್
Updated on
ಬೆಂಗಳೂರು: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಬೆಂಗಳೂರಿಗೆ ಆಗಮಿಸುತ್ತಿದ್ದು, ನಗರದ ಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಂಸದೀಯ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಅವರ ಆರೋಗ್ಯ ವಿಚಾರಿಸಲಿದ್ದಾರೆ.
ಇಂದು ಬೆಳಗ್ಗೆ ಲೋಕಸಭೆಯ ಸ್ಪೀಕರ್​  ಸುಮಿತ್ರಾ ಮಹಾಜನ್​ ಅವರು ಆಸ್ಪತ್ರೆಗೆ ಭೇಟಿ ನೀಡಿ, ಅನಂತ್​ಕುಮಾರ್​ ಅವರ ಆರೋಗ್ಯ ವಿಚಾರಿಸಿದ್ದು, ಸಂಜೆ ರಾಜನಾಥ್ ಸಿಂಗ್ ಅವರೂ ಕೂಡ ಬೆಂಗಳೂರಿಗೆ ಆಗಮಿಸಿ, ಅನಂತ್​ಕುಮಾರ್ ಅವರ ಆರೋಗ್ಯ ವಿಚಾರಿಸಲಿದ್ದಾರೆ.
ಅನಂತ್​ಕುಮಾರ್ ಅವರು ಶ್ವಾಸಕೋಶದ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿದ್ದು, ಬಸವನಗುಡಿಯ ಶಂಕರ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
ಭಾನುವಾರ ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ ಸುಮಿತ್ರಾ ಮಹಾಜನ್ ಅವರು ಅನಂತ್​ಕುಮಾರ್​ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com