2019ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಪದವಿ ಪೂರ್ವ ಶಿಕ್ಷಣ ಇಲಾಖೆ 2019ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿಯನ್ನು....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ 2019ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾ ಪಟ್ಟಿಯನ್ನು ಸೋಮವಾರ ಪ್ರಕಟಿಸಿದ್ದು, ಮಾರ್ಚ್ 1 ರಿಂದ ಮಾರ್ಚ್‌ 18ರವರೆಗೆ ಪರೀಕ್ಷೆಗಳು ನಡೆಯಲಿವೆ.
ಪ್ರಕಟಿತ ವೇಳಾಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್‌ 28ರೊಳಗೆ ಕೇಂದ್ರ ಕಚೇರಿಗೆ ತಲುಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ತನ್ನ ವೆಬ್ ಸೈಟ್ ನಲ್ಲಿ ತಿಳಿಸಿದೆ. ತಕರಾರು ಪಟ್ಟಿ ಪರಿಶೀಲನೆ ಬಳಿಕ ಅಂತಿಮ ವೇಳಾಪಟ್ಟಿ ಪ್ರಕಟವಾಗಲಿದೆ.
ಇಂದು ಪ್ರಕಟಗೊಂಡಿರುವ ವೇಳಾಪಟ್ಟಿ
ಮಾರ್ಚ್ 1 - ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಮ್ಯಾಥ್ಸ್
ಮಾರ್ಚ್ 2 - ಮಾಹಿತಿ ತಂತ್ರಜ್ಞಾನ, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್, ರಿಟೇಲ್
ಮಾರ್ಚ್5 - ತಮಿಳು, ಮಲಯಾಳಂ, ತೆಲುಗು, ಮರಾಠಿ, ಅರೇಬಿಕ್, ಫ್ರೆಂಚ್
ಮಾರ್ಚ್ 6 - ಲಾಜಿಕ್, ಶಿಕ್ಷಣ, ಭೂ ವಿಜ್ಞಾನ, ಗೃಹ ವಿಜ್ಞಾನ ಪರೀಕ್ಷೆ
ಮಾರ್ಚ್ 7 - ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಗಣಿತ
ಮಾರ್ಚ್ 8 - ಉರ್ದು, ಸಂಸ್ಕೃತ
ಮಾರ್ಚ್ 9 - ರಾಜಕೀಯ ಶಾಸ್ತ್ರ, ಸ್ಟಾಟಿಸ್ಟಿಕ್ಸ್
ಮಾರ್ಚ್ 11 - ಬ್ಯುಸಿನೆಸ್ ಸ್ಟಡೀಸ್, ಸಮಾಜಶಾಸ್ತ್ರ, ರಸಾಯನ ಶಾಸ್ತ್ರ
ಮಾರ್ಚ್ 12 - ಭೂಗೋಳ ಶಾಸ್ತ್ರ, ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ
ಮಾರ್ಚ್ 13 - ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
ಮಾರ್ಚ್ 14 - ಅರ್ಥಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 15 - ಹಿಂದಿ
ಮಾರ್ಚ್ 16 - ಕನ್ನಡ
ಮಾರ್ಚ್ 18 - ಇಂಗ್ಲಿಷ್

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com