ತುಮಕೂರಿನಲ್ಲಿ ಕಾರು ಅಪಘಾತ: ಇಬ್ಬರು ನೌಕರರು ಸಾವು, 5 ವಿದ್ಯಾರ್ಥಿಗಳಿಗೆ ಗಾಯ

ರಾಷ್ಟ್ರೀಯ ಹೆದ್ದಾರಿ-48ರ ಶಿರಾ ಬೈಪಾಸ್ ಹತ್ತಿರ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಪರಮಾಣು ...
ಸಿರಾ ಬೈಪಾಸ್ ಬಳಿ ಅಪಘಾತಕ್ಕೀಡಾದ ಕಾರು
ಸಿರಾ ಬೈಪಾಸ್ ಬಳಿ ಅಪಘಾತಕ್ಕೀಡಾದ ಕಾರು
Updated on: 

ತುಮಕೂರು: ರಾಷ್ಟ್ರೀಯ ಹೆದ್ದಾರಿ-48ರ ಶಿರಾ ಬೈಪಾಸ್ ಹತ್ತಿರ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಪರಮಾಣು ಶಕ್ತಿ ಇಲಾಖೆಯ ಇಬ್ಬರು ನೌಕರರು ಸ್ಥಳದಲ್ಲಿಯೇ ಮೃತಪಟ್ಟು ಐವರು ವೈದ್ಯಕೀಯ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.

ಮೃತಪಟ್ಟವರನ್ನು ಬೆಳಗಾವಿಯ ಕರಟಗಿ ಮೂಲದ ಶ್ರೀರಾಮಚಂದ್ರ(43ವ)ಹಾಗೂ ತಾಂತ್ರಿಕ ವಿಭಾಗದ ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಧನಂಜಯ ಎಂದು ಗುರುತಿಸಲಾಗಿದೆ. ಬೆಂಗಳೂರಿಗೆ ಬರುತ್ತಿದ್ದ ವೇಳೆ ಬೆಂಗಳೂರು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತವಾದ ರಭಸಕ್ಕೆ ಕಾರು ನೆಗೆದು ಬಿದ್ದು ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ನಿನ್ನೆ ಮುಂಜಾನೆ 5.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ವೈದ್ಯಕೀಯ ವಿದ್ಯಾರ್ಥಿಗಳು ಸಿರ್ಸಿಗೆ ಹಿಂತಿರುಗುತ್ತಿದ್ದರು. ಗಾಯಗೊಂಡ ವಿದ್ಯಾರ್ಥಿಗಳಲ್ಲಿ ಮೂವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡವರನ್ನು ಬೆಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ವರ್ಗಾಯಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com