ರಾಜ್ಯ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಕೊರೆತೆ: ಸಮೀಕ್ಷೆ

ರಾಜ್ಯದಲ್ಲಿರುವ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಕೂಡಲೇ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಅಗತ್ಯವಿದೆ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು: ರಾಜ್ಯದಲ್ಲಿರುವ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದ್ದು, ಕೂಡಲೇ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಅಗತ್ಯವಿದೆ ಎಂದು ಸಮೀಕ್ಷೆಯೊಂದು ಬಹಿರಂಗಪಡಿಸಿದೆ. 
ರಾಜ್ಯದಲ್ಲಿರುವ 415 ಸರ್ಕಾರಿ ಪದವಿ ಕಾರೇಜುಗಳ ಪೈಕಿ 65 ಕಾಲೇಜುಗಳಲ್ಲಿ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಳಿಲ್ಲದೆ ಪರದಾಡುತ್ತಿದೆ ಎಂದು ಸಮೀಕ್ಷೆ ಮಾಹಿತಿ ನೀಡಿದೆ. 
ಕಾಲೇಜು ಶಿಕ್ಷಣ ಇಲಾಖೆ ಈ ಸಮೀಕ್ಷೆಯನ್ನು ನಡೆಸಿದ್ದು, ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕೂಡಲೇ ಮೂಲಭೂತ ವ್ಯವಸ್ಥೆ ಕಲ್ಪಿಸುವ ಅಗತ್ಯವಿದೆ ಎಂದು ತಿಳಿಸಿದೆ. ಸಮೀಕ್ಷೆಯ ವರದಿಯನ್ನು ಈಗಾಗಲೇ ಸಿದ್ಧಪಡಿಸಿರುವ ಇಲಾಖೆಯು ಸರ್ಕಾರಕ್ಕೆ ಕಳುಹಿಸಿದ್ದು, ಮೂಲಭೂತ ಸೌಕರ್ಯ ವ್ಯವಸ್ಥೆ ಕಲ್ಪಿಸಲು ರೂ.757 ಕೋಟಿ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ತಿಳಿಸಿದೆ. 
68 ಕಾಲೇಜುಗಳಲ್ಲಿ 730 ಶಾಚಾಲಯಗಳನ್ನು ನಿರ್ಮಾಣ ಮಾಡಬೇಕಿದೆ. ಕಾಲೇಜುಗಳ ಸಂಖ್ಯೆಗಳಿಗಿಂತಲೂ ಶೌಚಾಲಯಗಳ ಸಂಖ್ಯೆಯನ್ನು ಹೆಚ್ಚಿಸಬೇಕಿದೆ. ಆದರೆ, ಸಾಕಷ್ಟು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಶೌಚಾಲಯ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆ ಎಂದು ವರದಿಯಲ್ಲಿ ತಿಳಿಸಿದೆ. 
ಕೇವಲ ಶೌಚಾಲಯಗಳಷ್ಟೇ ಅಲ್ಲ, 65 ಕಾಲೇಜುಗಳಲ್ಲಿ ಕುಡಿಯುವ ನೀರಿವ ವ್ಯವಸ್ಥೆಗಳೂ ಕೂಡ ಇಲ್ಲ. ಈ ಕುರಿತು ಕಾಲೇಜುಗಳ ಪ್ರಾಂಶುಪಾಲರೇ ಮಾಹಿತಿ ನೀಡಿದ್ದಾರೆಂದು ಹೇಳಿಕೊಂಡಿದೆ. 
1960ರಿಂದಲೂ ಕಾಲೇಜು ಶಿಕ್ಷಣ ಇಲಾಖೆ ಈ ರೀತಿಯ ಸೀಕ್ಷೆಗಳನ್ನು ನಡೆಸುತ್ತಿದ್ದು, ಅಂದಿನಿಂದ ಇಂದಿನವರೆಗೂ ಕೆಲ ಕಾಲೇಜುಗಳು ಭೂಮಿ, ಕಟ್ಟಡ ಹಾಗೂ ಕಾಂಪೌಂಡ್ ಸೇರಿ ಇತರೆ ಸಮಸ್ಯೆಗಳನ್ನು ಎದುರಿಸುತ್ತಲೇ ಇವೆ. 27 ಕಾಲೇಜುಗಳ ಹೆಸರಿನಲ್ಲಿ ಭೂಮಿಯೇ ಇಲ್ಲ. 6 ಕಾಲೇಜುಗಳು ಪಿಯುಸಿ ಕಾಲೇಜುಗಳ ಕಟ್ಟಡದೊಂದಿಗೆ ವಿಲೀನಗೊಂಡಿದೆ. ಅಥವಾ ಬಾಡಿಗೆ ಕಟ್ಟಡಗಳಲ್ಲಿ ಕಾಲೇಜುಗಳನ್ನು ನಡೆಸುತ್ತಿದೆ. ಪ್ರಸ್ತುತ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಎದ್ದುಕಾಣುತ್ತಿದ್ದು, ಈ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವ ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಆದರೆ, ಕಳೆದ ವರ್ಷದ ವರದಿಗಳಿಗೆ ಹೋಲಿಕೆ ಮಾಡಿದರೆ, ಪ್ರಸಕ್ತ ವರ್ಷ ಕಾಲೇಜುಗಳಲ್ಲಿ ವ್ಯವಸ್ಥೆಗಳು ಕೊಂಚ ಸುಧಾರಿಸಿವೆ. ತಮ್ಮ ಹೆಸರಿನಲ್ಲಿ ಭೂಮಿಯೇ ಇಲ್ಲದ ಕಾಲೇಜುಗಳ ಸಂಖ್ಯೆ 38 ರಿಂದ 27ಕ್ಕೆ ಇಳಿಕೆಯಾಗಿದೆ. ಕಟ್ಟಡಗಳಿಲ್ಲದ 102 ಕಾಲೇಜುಗಳ ಸಂಖ್ಯೆ 6ಕ್ಕೆ ಇಳಿದಿದೆ. ಇನ್ನು ಕಾಲೇಜುಗಳಲ್ಲಿ ದಾಖಲಾಗುವ ವಿದ್ಯಾರ್ಥಿಗಳ ಸಂಖ್ಯೆ ಕೂಡ 2.98 ಲಕ್ಷ ಹೆಚ್ಚಿದೆ ಎಂದು ಸಮೀಕ್ಷಾ ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com