ಕೋಟೆನಾಡು ಚಿತ್ರದುರ್ಗದಲ್ಲಿ 3ರ ಪೈಕಿ 2ರಲ್ಲಿ ಬಿಜೆಪಿ ಗೆಲುವು, ಕಾಂಗ್ರೆಸ್ ಗೆ ಒಂದು ಸ್ಥಾನ

ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಘೋಷಣೆಯಾಗಿದ್ದು, ಕೋಟೆನಾಡು ಚಿತ್ರದುರ್ಗದ 3 ಸ್ಥಾನಗಳ ಪೈಕಿ 2ರಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಅಂತೆಯೇ ಕಾಂಗ್ರೆಸ್ ಪಕ್ಷ 1 ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.
ಕಾರ್ಯಕರ್ತರ ಸಂಭ್ರಮ
ಕಾರ್ಯಕರ್ತರ ಸಂಭ್ರಮ
ಬೆಂಗಳೂರು: ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಘೋಷಣೆಯಾಗಿದ್ದು, ಕೋಟೆನಾಡು ಚಿತ್ರದುರ್ಗದ 3 ಸ್ಥಾನಗಳ ಪೈಕಿ 2ರಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಅಂತೆಯೇ ಕಾಂಗ್ರೆಸ್ ಪಕ್ಷ 1 ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.
ಚಿತ್ರದುರ್ಗ ಜಿಲ್ಲೆಯ ಮೂರು ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಮೂರು ಸ್ಥಳೀಯ ಸಂಸ್ಥೆಗಳ ಪೈಕಿ ಎರಡರಲ್ಲಿ ಬಿಜೆಪಿ ಗೆದ್ದು, ಒಂದರಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿದಿದೆ. ಚಿತ್ರದುರ್ಗ ನಗರಸಭೆ 35 ವಾರ್ಡ್ ಗಳಲ್ಲಿ ಬಿಜೆಪಿ 17, ಜೆಡಿಎಸ್ 6, ಕಾಂಗ್ರೆಸ್ 5 ಮತ್ತು ಪಕ್ಷೇತರರು 7 ವಾರ್ಡ್ ಗಳಲ್ಲಿ ಜಯಗಳಿಸಿದ್ದಾರೆ. ಚಳ್ಳಕೆರೆ ನಗರಸಭೆಯ 31 ವಾರ್ಡ್ ಗಳಲ್ಲಿ ಕಾಂಗ್ರೆಸ್ 16, ಜೆಡಿಎಸ್ 10, ಬಿಜೆಪಿ 4 ಮತ್ತು ಪಕ್ಷೆತರರು 1ರಲ್ಲಿ ಜಯಗಳಿಸಿದ್ದಾರೆ.
ಹೊಸದುರ್ಗ ಪುರಸಭೆಯ 21 ವಾರ್ಡ್ ಗಳಲ್ಲಿ ಬಿಜೆಪಿ 14, ಕಾಂಗ್ರೆಸ್ 4 ಮತ್ತು ಪಕ್ಷೇತರರು 5 ವಾರ್ಡ್ ಗಳಲ್ಲಿ ಜಯ ಸಾಧಿಸಿದ್ದು, ಚಿತ್ರದುರ್ಗ ನಗರಸಭೆ ಮತ್ತು ಹೊಸದುರ್ಗ ಪುರಸಭೆ ಬಿಜೆಪಿಗೆ ಪಾಲಾಗಿದೆ. ಚಳ್ಳಕೆರೆ ನಗರಸಭೆ ಕಾಂಗ್ರೆಸ್ ಕೈ ವಶವಾಗಿದೆ. ಈ ಮೂಲಕ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಚಿತ್ರದುರ್ಗ ನಗರಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು ಉತ್ಸುಕವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com