ಹಾಸನದಲ್ಲಿ ಜೆಡಿಎಸ್ ಗೆ ಪ್ರಯಾಸದ ಜಯ, ಭವಾನಿ ರೇವಣ್ಣ ಬಲಪ್ರದರ್ಶನಕ್ಕೆ ಸಾಕ್ಷಿಯಾದ ಹೊಳೆನರಸೀಪುರ

ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಹಾಸನದಲ್ಲಿ ಜೆಡಿಎಸ್ ಪ್ರಯಾಸದ ಗೆಲುವಿನ ನಗೆ ಬೀರಿದೆ.
ಭವಾನಿ ರೇವಣ್ಣ (ಸಂಗ್ರಹ ಚಿತ್ರ)
ಭವಾನಿ ರೇವಣ್ಣ (ಸಂಗ್ರಹ ಚಿತ್ರ)
Updated on: 
ಹಾಸನ: ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಹಾಸನದಲ್ಲಿ ಜೆಡಿಎಸ್ ಪ್ರಯಾಸದ ಗೆಲುವಿನ ನಗೆ ಬೀರಿದೆ.
ಹಾಸನ ನಗರಸಭೆಯಲ್ಲಿ ಜೆಡಿಎಸ್ ಪ್ರಯಾಸದ ಗೆಲುವು ಸಾಧಿಸಿದ್ದು, ನಗರಸಭೆಯ ಒಟ್ಟು 32 ಸ್ಥಾನಗಳ ಪೈಕಿ ಜೆಡಿಎಸ್ 18ರಲ್ಲಿ ಗೆಲುವಿನ ನಗೆ ಬೀರಿದೆ. ಜೆಡಿಎಸ್ ಗೆ ತೀವ್ರ ಪೈಪೋಟಿ ನೀಡಿದ ಬಿಜೆಪಿ 12 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಇನ್ನು ಇಲ್ಲಿ ಕಾಂಗ್ರೆಸ್ 2 ಸ್ಥಾನಗಳಿಗೆ ಮಾತ್ರ ತೃಪ್ತಿ ಪಟ್ಟುಕೊಂಡಿದೆ. 
ಕಳೆದ ಬಾರಿ ಇಲ್ಲಿ ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿದ್ದ ಜೆಡಿಎಸ್ ಈ ಬಾರಿ 1 ಸ್ಥಾನ ಕಡಿಮೆ ಅಂದರೆ 18 ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಕಳೆದ ಕೇವಲ 2 ಸ್ಥಾನ ಪಡೆದಿದ್ದ ಬಿಜೆಪಿ ಈ ಬಾರಿ 12 ಸ್ಥಾನಗಳನ್ನು ಜಯಿಸುವ ಮೂಲಕ ತನ್ನ ಪ್ರಾಬಲ್ಯ ಹೆಚ್ಚಿಸಿಕೊಂಡಿದೆ. ಅಂತೆಯೇ ಕಳೆದ ಬಾರಿ 9 ಸ್ಥಾನ ಹೊಂದಿದ್ದ ಕಾಂಗ್ರೆಸ್ ಈ ಬಾರಿ 2 ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.
ಇನ್ನು ಅರಸೀಕೆರೆ ನಗರಸಭೆಯಲ್ಲಿ ಜೆಡಿಎಸ್ ಜಯಭೇರಿ ಭಾರಿಸಿದ್ದು, ಇಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಖಾತೆ ತೆರೆಯುವಲ್ಲಿ ವಿಫಲವಾಗಿವೆ. 
ಭವಾನಿ ರೇವಣ್ಣ ಬಲಪ್ರದರ್ಶನಕ್ಕೆ ಸಾಕ್ಷಿಯಾದ ಹೊಳೆನರಸೀಪುರ
ಇತ್ತ ಹಾಸನ ನಗರಸಭೆಯಲ್ಲಿ ಜೆಡಿಎಸ್ ಪ್ರಯಾಸದ ಗೆಲುವು ಸಾಧಿಸಿದ್ದರೂ, ಹೊಳೆನರಸೀಪುರದಲ್ಲಿ ಮಾತ್ರ ಜೆಡಿಎಸ್ ಭರ್ಜರಿ ಜಯ ದಾಖಲಿಸಿದೆ. ಹೊಳೆನರಸೀಪುರ ಪುರಸಭೆಯನ್ನು ಜೆಡಿಎಸ್ ಕ್ಲೀನ್ ಸ್ವೀಪ್ ಮಾಡಿದ್ದು, ಇಂಧನ ಸಚಿವ ರೇವಣ್ಣ ಅವರ ಸ್ವಕ್ಷೇತ್ರದ‌ಲ್ಲಿ ಜೆಡಿಎಸ್ ನಿರೀಕ್ಷೆಗೂ ಮೀರಿದ ಸಾಧನೆಗೈದಿದೆ. ಇಲ್ಲಿ ಪ್ರಮುಖವಾಗಿ ಸಚಿವ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ವರ್ಚಸ್ಸು ಕೆಲಸ ಮಾಡಿದ್ದು, ಒಟ್ಟು 23 ಸ್ಥಾನಗಳ ಪೈಕಿ 23 ಸ್ಥಾನಳಲ್ಲಿಯೂ ಜೆಡಿಎಸ್ ಅಭ್ಯರ್ಥಿಗಳು ಜಯಭೇರಿ ಭಾರಿಸಿದ್ದಾರೆ. ಇನ್ನು ಕಳೆದ ಬಾರಿ 5 ಸ್ಥಾನ ಹೊಂದಿದ್ದ ಕಾಂಗ್ರೆಸ್ ಪಕ್ಷ ಈಗ ಶೂನ್ಯ ಸಾಧನೆಗೈದಿದೆ. ಇನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೊಳೆ ನರಸೀಪುರದಲ್ಲಿ ಜೆಡಿಎಸ್ ಉಸ್ತುವಾರಿ ಹೊತ್ತಿದ್ದ ಭವಾನಿ ರೇವಣ್ಣ ಅವರ ಕೈಗೆ ಮತ್ತಷ್ಟು ಬಲಬಂದಂತಾಗಿದ್ದು, ಜಿಲ್ಲೆಯ 5ರಲ್ಲಿ 4 ಕಡೆ ಜೆಡಿಎಸ್ ಜಯಭೇರಿ ಬಾರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com