ಹಾಸನ: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಪರಸ್ಪರ ದಾಳಿ, ತೀವ್ರ ಗಾಯ

ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಬ್ಬರು ಪರಸ್ಪರ ದಾಳಿ ಮಾಡಿಕೊಂಡು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಸಂತೆಪೇಟೆ ವೃತ್ತ
ಸಂತೆಪೇಟೆ ವೃತ್ತ
Updated on

ಹಾಸನ : ರಾಜ್ಯ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳಿಬ್ಬರು ಪರಸ್ಪರ ದಾಳಿ ಮಾಡಿಕೊಂಡು  ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ನಡುವೆ  ಈ ಜಗಳ ನಡೆದಿದ್ದು, ಗಾಯಾಳುಗಳನ್ನು ಇರ್ಪಾನ್  ಮತ್ತು ಉಮರ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ  ವಾರ್ಡ್ ನಂಬರ್ 35 ರಿಂದ ಚುನಾವಣೆಗೆ ಸ್ಪರ್ಧಿಸಿದ್ದರು.

ಹಾಡಹಗಲೇ ಇಬ್ಬರ ನಡುವೆ ಜಗಳ ಉಂಟಾಗಿದ್ದು, ಚಾಕುವಿನಿಂದ ಪರಸ್ಪರ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 ಹಾಸನದ ಹೃದಯ ಭಾಗ ಸಂತೆಪೇಟೆ  ವೃತ್ತದಲ್ಲಿ ಈ ಘಟನೆ ನಡೆದಿದ್ದು,ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಪರಸ್ಪರ ಬೈದಾಡಿಕೊಂಡಿದ್ದಾರೆ.  ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆ  ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಈ ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತವಾರಣ ನಿರ್ಮಾಣವಾಯಿತು. ವಾಹನ ಸಂಚಾರ ದಟ್ಟಣೆಯೂ  ಉಂಟಾಗಿತ್ತು.  ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com