ಕ್ಯಾಂಟರ್- ಕಾರು ಮುಖಾಮುಖಿ ಡಿಕ್ಕಿ: ಬೆಂಗಳೂರು ಕಿಮ್ಸ್ ನ 3 ಎಂಬಿಬಿಎಸ್ ವಿದ್ಯಾರ್ಥಿಗಳ ದುರ್ಮರಣ

ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಕ್ಯಾಂಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ ಬಳಿ ಸಂಭವಿಸಿದ ಅಪಘಾತದಲ್ಲಿ  ಬೆಂಗಳೂರಿನ ಕಿಮ್ಸ್ ನ ಮೂವರು ವೈದ್ಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶಾಲ್, ಪ್ರಜ್ವಲ್, ಭೂಷಣ್ ಮೃತ ದುರ್ದೈವಿಗಳು. ಏರ್ ಪೋರ್ಟ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com