ಶಿರಾಡಿ ಘಾಟ್ ನಲ್ಲಿ ಲಘುವಾಹನಗಳ ಸಂಚಾರ ಮತ್ತೆ ಆರಂಭ

ಮಳೆ ಹಾಗೂ ಗುಡ್ಡ ಕುಸಿತದ ಕಾರಣದಿಂದ ಕೆಲ ತಿಂಗಳಿನಿಂದ ಬಂದ್ ಆಗಿದ್ದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಲಘು ವಾಹನಗಳ ಸಂಚಾರ ಆರಂಭಗೊಂಡಿದೆ.
ಶಿರಾಡಿ ಘಾಟ್
ಶಿರಾಡಿ ಘಾಟ್

ಹಾಸನ: ಮಳೆ ಹಾಗೂ ಗುಡ್ಡ ಕುಸಿತದ ಕಾರಣದಿಂದ  ಕೆಲ ತಿಂಗಳಿನಿಂದ ಬಂದ್ ಆಗಿದ್ದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಲಘು ವಾಹನಗಳ ಸಂಚಾರ ಆರಂಭಗೊಂಡಿದೆ.

ಬೆಂಗಳೂರು- ಮಂಗಳೂರು ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮತಿ ನೀಡಿದೆ.

ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ದಟ್ಟಣೆ ಹಾಗೂ ಪ್ರಯಾಣಿಕರಿಗೆ  ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹಾಸನ ಜಿಲ್ಲಾಧಿಕಾರಿ ರೊಹಿಣಿ ಸಿಂಧೂರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಈ ಹೆದ್ದಾರಿಯಲ್ಲಿ   ಅಗತ್ಯ  ಕ್ರಮ ಕೈಗೊಂಡು ವಾಹನಗಳ ದಟ್ಟಣೆ ನಿಯಂತ್ರಿಸುವಂತೆ  ಎಸ್ ಪಿ ರಾಹುಲ್ ಕುಮಾರ್ ಅವರಿಗೆ  ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

ರಸ್ತೆ ಪರಿಸ್ಥಿತಿ ಬಗ್ಗೆ ಮೇಲ್ವಿಚಾರಣೆ ನಡೆಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಗಳಿಂದ ಸುರಕ್ಷತಾ ಪ್ರಮಾಣ ಪತ್ರ ಪಡೆಯದ ನಂತರ 10 ದಿನಗಳೊಳಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಅನುಮತಿ ನೀಡುವ ಕ್ರಮ ಕೈಗೊಳ್ಳಲಾಗುವುದು ಎಂದು ಲೊಕೋಪಯೋಗಿ ಸಚಿವ ಎಚ್. ಡಿ. ರೇವಣ್ಣ ಹೇಳಿದ್ದಾರೆ.

ಮುಂದಿನ ಆದೇಶದವರೆಗೂ ಕೇವಲ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ.  ಸುರಕ್ಷತಾ ಪ್ರಮಾಣ ಪತ್ರ ನಡೆದ ನಂತರ ಕೆಎಸ್ ಆರ್ ಟಿಎಸ್, ಮಲ್ಟಿ ಎಕ್ಸೆಲ್ ವೊಲ್ವೊ ಬಸ್ ಮತ್ತು ಲಾರಿಗಳಿಗೆ ಅವಕಾಶ ನೀಡಲಾಗುವುದು.ಈ ಸಂಬಂಧ ಇದೇ 10 ರಂದು ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com