ರೂ.5,912 ಕೋಟಿ ಮೌಲ್ಯದ ಮೇಕೆದಾಟು ಜಲಾಶಯ ಹಾಗೂ ಕುಡಿಯುವ ನೀರು ಯೋಜನೆ ಕಾರ್ಯಸಾಧು ವರದಿಗೆ ಅನುಮತಿ ಕೋರುವಾಗ ಕರ್ನಾಟಕ ರಾಜ್ಯವು ತಮಿಳುನಾಡಿಗೆ ಮಾಹಿತಿಯೇ ನೀಡಿಲ್ಲ. ಹೀಗಾಗಿ ಅನುಮತಿ ನೀಡುವ ಮುಂದಿನ ಪ್ರಕ್ರಿಯೆ ತಡೆಗೆ ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು. ಜೊತೆಗೆ ಕೇಂದ್ರ ಜಲ ಆಯೋಗವು, ಕರ್ನಾಟಕದ ಪ್ರಸ್ತಾಪವನ್ನು ಸ್ವೀಕರಿಸುವ ಬದಲು, ವಿಷಯಕ್ಕೆ ಸಂಬಂಧಿಸಿ ತಮಿಳುನಾಡಿನ ಸಮ್ಮತಿ ಪಡೆಯುವಂತೆ ಕರ್ನಾಟಕಕ್ಕೆ ನಿರ್ದೇಶಿಸಬೇಕೆಂದು ಹೇಳಿಕೊಂಡಿದ್ದಾರೆಂದು ತಿಳಿದುಬಂದಿದೆ.