ಬೆಂಗಳೂರು: ಬೀದಿನಾಯಿಗಳ ದಾಳಿಗೆ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ !

ರಾಜಧಾನಿ ಬೆಂಗಳೂರಿನಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ಶಾಲೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ರಾಜಾಜಿನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ಶಾಲೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ  ರಾಜಾಜಿನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ.

9ನೇ ತರಗತಿ ವಿದ್ಯಾರ್ಥಿ ಆಕಾಶ್ ಹಾಗೂ ಸಾಯಿ ಸಿರಿ ನಾಯಿಗಳಿಂದ ಹಲ್ಲೆಗೊಳಗಾದ ವಿದ್ಯಾರ್ಥಿಗಳು. ಇಬ್ಬರು ಸೆಂಟ್ ಮೇರಿಸ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಈ ವಿದ್ಯಾರ್ಥಿಗಳು ಶಾಲೆಗೆ ತೆರಳುತ್ತಿರಬೇಕಾದರೆ ರಾಜಾಜಿನಗರ ಆರನೇ ಬ್ಲಾಕಿನ ಗುಬ್ಬಣ್ಣ ಲೇಔಟ್ ನಲ್ಲಿ ನಾಯಿಗಳು ದಾಳಿ ನಡೆಸಿವೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

ಕೂಡಲೇ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಕಾಶ್ ಚಿಕಿತ್ಸೆ ಪಡೆದು ಮನೆಗೆ ವಾಪಾಸ್ ಆಗಿದ್ದು, ಪೋಷಕರು ಬಿಬಿಎಂಪಿಗೆ ದೂರು ನೀಡಲು ನಿರ್ಧರಿಸಿದ್ದಾರೆ.

ಕಳೆದ ವಾರದಿಂದೀಚೆಗೆ ಎರಡು ಬೀದಿ ನಾಯಿಗಳ ದಾಳಿ ಪ್ರಕರಣಗಳು ವರದಿಯಾಗಿದೆ. ಈ ಹಿಂದೆ ಪ್ರವೀಣ್ ಎಂಬಾತನ ಮೇಲೆ ದಾಳಿ ನಡೆಸಿದ್ದರಿಂದ ಆ ಬಾಲಕ ತೀವ್ರವಾಗಿ ಗಾಯಗೊಂಡಿದ್ದ.

ನಾಯಿಗಳ ಸಂತಾನ ನಿಯಂತ್ರಿಸುವ ಕಾರ್ಯಕ್ರಮ ಹಾಕಿಕೊಳ್ಳುವಲ್ಲಿ ವಿಫಲವಾಗಿರುವುದರಿಂದ ಜನರ ಮೇಲಿನ ದಾಳಿ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಪ್ರಾಣಿ ಹಕ್ಕುಗಳ ಹೋರಾಟಗಾರರು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com