ಉಡುಪಿ ಕೃಷ್ಣಮಠಕ್ಕೆ ಸಿಎಂ ಭೇಟಿ, ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಕುಮಾರಸ್ವಾಮಿ ಕೃಷ್ಣ ದರ್ಶನ

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಪ್ರವಾಸದಲ್ಲಿದ್ದಾರೆ. ಶುಕ್ರವಾರ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ.
ಉಡುಪಿ ಕೃಷ್ಣಮಠಕ್ಕೆ ಕುಮಾರಸ್ವಾಮಿ ಭೇಟಿ
ಉಡುಪಿ ಕೃಷ್ಣಮಠಕ್ಕೆ ಕುಮಾರಸ್ವಾಮಿ ಭೇಟಿ
ಉಡುಪಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಪ್ರವಾಸದಲ್ಲಿದ್ದಾರೆ. ಶುಕ್ರವಾರ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ.
ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕೃಷ್ಣನ ದರ್ಶನ ಪಡೆದದ್ದಲ್ಲದೆ ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರ ಆಶೀರ್ವಾದ ಪಡೆದರು.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ,ವಿಧಾನ ಪರಿಷತ್ತಿನ ಸದಸ್ಯ ಬೋಜೇ ಗೌಡ  ಅವರೊಡನೆ ಮಠಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ಅವರಿಗೆ ಶ್ರೀಗಳು ರೇಷ್ಮೆ ಶಾಲು, ಮುತ್ತಿನ ಹಾರ, ಸ್ವರ್ಣ ಗೋಪುರದ ಸ್ಮರಣಿಕೆ ಸಹಿತ ಪ್ರಸಾದವನ್ನು ನೀಡಿದ್ದಾರೆ.
ಮಠದ ಭೇಟಿಯ ಬಳಿಕ ಮುಖ್ಯಮಂತ್ರಿಗಳು ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಪ್ರಗತಿ ಪರಿಶೀಲನೆ ಸಭೆಗೆ ಹಾಜರಾಗಿದ್ದಾರೆ.
ಸೆಪ್ಟೆಂಬರ್. 9 ರಂದು ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯುವ ವಿಶ್ವ ಬಂಟರ ಸಮ್ಮೇಳನ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ.
ಮಂಗಳೂರಿನಿಂದ ಉಡುಪಿಗೆ
ಶುಕ್ರವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅಲ್ಲಿ ಗೌರವ ರಕ್ಷೆ ಸ್ವೀಕರಿಸಿ ಕಾರಿನಲ್ಲಿ ಉಡುಪಿಗೆ ಪ್ರಯಾಣಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com