ಪ್ರಕರಣ ಇತ್ಯರ್ಥದವರೆಗೆ ಶ್ರೀರಾಮಚಂದ್ರಾಪುರ ಮಠದ ಸುಪರ್ದಿಗೆ ಗೋಕರ್ಣ ದೇವಾಲಯದ ಆಡಳಿತ: ಸುಪ್ರೀಂ ಕೋರ್ಟ್

ಪವಿಒತ್ರ ಯಾತ್ರಾಸ್ಥಳ ಗೋಕರ್ಣ ಮಹಾಬಲೇಶ್ವರ ದೇವಾಲಯವನ್ನು ರಾಮಚಂದ್ರಾಪುರ ಮಠದ ಆಡಳಿತದಿಂದ ಧಾರ್ಮಿಕ ದತ್ತಿ ಇಲಾಖೆಗೆ ಹಸ್ತಾಂತರಿಸಬೇಕೆಂದು....
ಗೋಕರ್ಣ ಮಹಾಬಲೇಶ್ವರ ದೇವಾಲಯ
ಗೋಕರ್ಣ ಮಹಾಬಲೇಶ್ವರ ದೇವಾಲಯ
Updated on
ನವದೆಹಲಿ: ಗೋಕರ್ಣ ಮಹಾಬಲೇಶ್ವರ ದೇವಾಲಯವನ್ನು ರಾಮಚಂದ್ರಾಪುರ ಮಠದ ಆಡಳಿತದಿಂದ ಧಾರ್ಮಿಕ ದತ್ತಿ ಇಲಾಖೆಗೆ ಹಸ್ತಾಂತರಿಸಬೇಕೆಂಬ ಪ್ರಕರಣ ಇತ್ಯರ್ಥವಾಗುವವರೆಗೆ ದೇವಾಲಯದ ಆಡಳಿತವನ್ನು ಶ್ರೀಮಠವೇ ಮುಂದುವರೆಸಿಕೊಂಡು ಹೋಗಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 
ಇದೇ ವೇಳೆ ಸೆಪ್ಟೆಂಬರ್ 10 ರ ನಂತರ ಜಿಲ್ಲಾಧಿಕಾರಿ  ನೇತೃತ್ವದ ಸಮಿತಿ ಅಧಿಕಾರ ವಹಿಸಿಕೊಳ್ಳುವುದಕ್ಕೆ ತಡೆಸಿಕ್ಕಿದ್ದು, ಸುಪ್ರೀಂ ಕೋರ್ಟಿನಲ್ಲಿ ತೀರ್ಮಾನ ಆಗುವವರೆಗೂ ದೇವಾಲಯದ ಆಡಳಿತವನ್ನು ಶ್ರೀಮಠವೇ ನಿರ್ವಹಿಸಲಿದೆ. ಪ್ರತಿವಾದಿಗಳಿಗೆ ನೋಟೀಸ್ ಜಾರಿ ಮಾಡಿರುವ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿದೆ.
ಗೋಕರ್ಣ ದೇವಾಲಯವನ್ನು ರಾಮಚಂದ್ರಾಪುರ ಮಠದ ಸುಪರ್ದಿಗೆ ವಹಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಸೆ.10 ವರೆಗೆ ಮಾತ್ರ ಮಠ ದೇವಾಲಯದ ಆಡಳಿತ ನಡೆಸಲಿದೆ. ಆ ನಂತರ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಆಡಳಿತವನ್ನು ವಹಿಸಿಕೊಳ್ಳಲಿದೆ ಎಂದು ಹೇಳಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com