ದಾವಣಗೆರೆ: ಡಿವೈಡರ್​​ಗೆ ಕಾರು ಡಿಕ್ಕಿ; ಬೆಂಗಳೂರಿನ ನಾಲ್ವರ ದುರ್ಮರಣ

ಹರಗನಹಳ್ಳಿಯಲ್ಲಿ ತಡರಾತ್ರಿ ಕಾರೊಂದು ಡಿವೈಡರ್‌ಗೆ ಢಿಕ್ಕಿಯಾಗಿ ಸಂಭವಿಸಿದ ಅವಘಡದಲ್ಲಿ ಬೆಂಗಳೂರಿನ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ದಾವಣಗೆರೆ: ಹರಗನಹಳ್ಳಿಯಲ್ಲಿ ತಡರಾತ್ರಿ ಕಾರೊಂದು ಡಿವೈಡರ್‌ಗೆ ಢಿಕ್ಕಿಯಾಗಿ ಸಂಭವಿಸಿದ ಅವಘಡದಲ್ಲಿ ಬೆಂಗಳೂರಿನ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. 
ವಿನಯ್ (27), ಅಜಯ್ (32) ವಿನಯ್ (30) ಸ್ಥಳದಲ್ಲಿಯೇ ಸಾವನ್ನಪ್ಪಿದರೇ, ಸಿದ್ದಪ್ಪ (28) ಎಂಬಾತ  ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.
ಮೃತರೆಲ್ಲರೂ ಬೆಂಗಳೂರು ಮೂಲದವರು ಎನ್ನಲಾಗಿದೆ. ಬೆಂಗಳೂರಿನ ಚಾಮರಾಜಪೇಟೆಯ ಡಿಟಿಡಿಸಿ ಕೊರಿಯರ್ ಉದ್ಯೋಗಿಗಳಾಗಿದ್ದರು. ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಅತೀವೇಗದಲ್ಲಿ ಚಲಿಸುತ್ತಿದ್ದುದೇ ಅವಘಡಕ್ಕೆ ಕಾರಣ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಕೆಎ 42. ಎಂ 9491 ಕ್ರಿಯೇಟ್ ಕಾರ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಹೀಗೆ ಡಿವೈಡರ್ ಗೆ ಡಿಕ್ಕಿ ಹೊಡೆದ ಬಳಿಕ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಘಟನೆ ಸಂಬಂಧ ಹರಿಹರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com