ಭಾರತ್ ಬಂದ್: ಶಾಲಾ ಕಾಲೇಜು ರಜೆ ವಿಚಾರ, ಪರಿಸ್ಥಿತಿ ನೋಡಿ ಜಿಲ್ಲಾಡಳಿತ ನಿರ್ಧಾರ

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಮೂಲಗಳ ಪ್ರಕಾರ ನಿನ್ನೆ ಶನಿವಾರ ರಜೆ ಇದ್ದಿದ್ದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ಈ ಕುರಿತು ಯಾವುದೇ ಸಭೆ ನಡೆಸದೇ ತಿರ್ಮಾನ ಕೈಗೊಂಡಿಲ್ಲ. ಆದರೆ ಕೆಲ ಖಾಸಗಿ ಶಾಲಾ-ಕಾಲೇಜುಗಳು ನಾಳೆ ಸಾರಿಗೆ ವ್ಯವಸ್ಥೆ ಸ್ಥಗಿತವಾಗಿರುವುದರಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲು ಮುಂದಾಗಿವೆ. ಅಲ್ಲದೆ ನಾಳೆ ರಜೆ ಘೋಷಣೆ ಮಾಡಿ ಮುಂದಿನ ಶನಿವಾರ ಅಂದರೆ ಸೆಪ್ಟೆಂಬರ್ 15ರಂದು ಇಡೀ ದಿನ ತರಗತಿ ನಡೆಸಲು ಸಿದ್ಧತೆ ನಡೆಸಿವೆ ಎಂದು ತಿಳಿದುಬಂದಿದೆ.
ಇತ್ತ ರಾಜ್ಯ ಸರ್ಕಾರ ಕೂಡ ಶಾಲಾ-ಕಾಲೇಜುಗಳಿಗೆ ಅಧಿಕೃತವಾಗಿ ರಜೆ ಘೋಷಿಸಿಲ್ಲ. ಆದರೆ, ಪರಿಸ್ಥಿತಿ ಅವಲೋಕಿಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಆಯಾ ಜಿಲ್ಲಾಡಳಿತಗಳ ವಿವೇಚನೆಗೆ ಬಿಡಲಾಗಿದೆ.  ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್‌. ಮಹೇಶ್‌ ಅವರು, 'ಶನಿವಾರ ರಜೆ ಇದ್ದುದರಿಂದ ಈ ಸಂಬಂಧ ಅಧಿಕಾರಿಗಳ ಜತೆ ಚರ್ಚಿಸಲು ಸಾಧ್ಯವಾಗಿಲ್ಲ. ಆದರೆ, ಬಂದ್ ನ ತೀವ್ರತೆ ನೋಡಿಕೊಂಡು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಜೆ ನೀಡುವ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ' ಎಂದು ಹೇಳಿದರು. 
'ಖಾಸಗಿ ಶಾಲೆಗಳಿಗೂ ರಜೆ ಘೋಷಿಸಿಲ್ಲ. ಪರಿಸ್ಥಿತಿ ಆಧರಿಸಿ ರಜೆ ನೀಡುವ ಅಧಿಕಾರವನ್ನು ಆಯಾ ಶಾಲಾ ಆಡಳಿತ ಮಂಡಳಿಗಳ ನಿರ್ಧಾರಕ್ಕೆ ಬಿಡಲಾಗಿದೆ' ಎಂದು 'ಕ್ಯಾಮ್ಸ್‌'ನ ಕಾರ್ಯದರ್ಶಿ ಡಿ. ಶಶಿಕುಮಾರ್‌ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com