ಹಲವೆಡೆ ಬೆಂಕಿ ಹಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಹಲವೆಡೆ ಬೆಂಕಿ ಹಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಭಾರತ್ ಬಂದ್ ಗೆ ರಾಜ್ಯದಲ್ಲಿ ಬೆಂಬಲ: ರಸ್ತೆಗಿಳಿಯದ ಬಿಎಂಟಿಸಿ, ಮೆಟ್ರೋ ಸಂಚಾರ ಅಬಾಧಿತ; ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

ತೈಲ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಕರೆ ನೀಡಿರುವ ಭಾರತ್ ಬಂದ್ ಗೆ ಕರ್ನಾಟಕದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ, ...
ಬೆಂಗಳೂರು: ತೈಲ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಕರೆ ನೀಡಿರುವ ಭಾರತ್ ಬಂದ್ ಗೆ ಕರ್ನಾಟಕದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ, 
ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆ ವರೆಗೆ ಬಂದ್ ಗೆ ಕರೆ ನೀಡಲಾಗಿದೆ, 
ಭಾರತ್ ಬಂದ್ ಗೆ ಉತ್ತರ ಕರ್ನಾಟಕ ಸೇರಿದಂತೆ ಮಂಗಳೂರು, ಉಡುಪಿ, ಕುಂದಾಪುರದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖಾಸಗಿ ಹಾಗೂ ಸರ್ಕಾರಿ ಬಸ್ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. 
ಬಂಟ್ವಾಳದಲ್ಲಿ  ಕೆಎಸ್ ಆರ್ ಟಿಸಿ ಬಸ್ ಮೇಲೆ ಕಲ್ಲುತೂರಾಟ ನಡೆಸಿದ್ದು ಬಸ್ ಗೆ ಹಾನಿಯಾಗಿದೆ, ದಾವಣಗೆರೆ,  ಚಿತ್ರದುರ್ಗ, ವಿಜಯಪುರ, ಕೋಲಾರ, ಮತ್ತು ಹಾಸನಗಳಲ್ಲಿ  ಬಂದರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತ ಪಡಿಸಿದ್ದಾರೆ. 
ಹಲವು ನಗರಗಳಲ್ಲಿ ಪಕ್ಷದ ಸದಸ್ಯರು ತೆರಳಿ ಅಂಗಡಿ ಮಾಲಿಕರ ಮನವೊಲಿಸಿ  ಬಾಗಿಲು ಮುಚ್ಚಿಸಿದ್ದಾರೆ. ಆದರೆ ಎಲ್ಲಿಯೂ ದೊಡ್ಡ ಮಟ್ಟದ ಹಾನಿಯಾಗಿಲ್ಲ.  ರಾಜ್ಯದ ಬಹುತೇಕ ಎಲ್ಲಾ ಶಾಲಾ-ಕಾಲೇಜುಗಳಿಗೂ ಇಂದು ರಜೆ ಘೋಷಿಸಲಾಗಿದೆ.
ಇನ್ನೂ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗಳು ರಸ್ತೆಗಳಿಗಯದೇ ಬಂದ್ ಗೆ ಬೆಂಬಲ ಸೂಚಿಸಿವೆ,  ಬಸ್ ಸಂಚಾರ ಸ್ಥಗಿತವಾಗಿದ್ದು ಮೆಟ್ರೋ ರೈಲು ಎಂದಿನಂತೆ ಕಾರ್ಯ ನಿರ್ವಹಿಸುತ್ತಿದೆ.
ಇನ್ನೂ ಕೆಂಪೆಗೌಡ ವಿಮಾನ ನಿಲ್ದಾಣ ರಸ್ತೆಯಲ್ಲಿ  ಟ್ರಾಫಿಕ್ ಜಾಮ್ ಉಂಟಾಗಿದ್ದು ಸರಿಯಾದ ಸಮಯಕ್ಕೆ ತಲುಪವಲಾಗದೇ ಪ್ರಯಾಣಿಕರು ಪರದಾಡುವಂತಾಗಿದೆ, 
ನಾಲ್ಕು ಗಂಟೆ ಮುಂಚಿತವಾಗಿಯೇ ಬರುವಂತೆ ಪ್ರಯಾಣಿಕರಿಗೆ ವಿಮಾನ ನಿಲ್ದಾಣ ಪ್ರಾಧಿಕಾರ ಸೂಚಿಸಿತ್ತು. ಇನ್ನೂ  ಕಡಿಮೆ ದರದಲ್ಲಿ ಊಟ ನೀಡುವ ಇಂದಿರಾ ಕ್ಯಾಂಟೀನ್ ಎಂದಿನಂತೆ ಕಾರ್ಯ ನಿರ್ವಹಿಸುತ್ತಿದೆ,.
ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರ ಇಲ್ಲದಿರುವುದರಿಂದ ಆಟೋ ಮತ್ತು ಕ್ಯಾಬ್ ಗಳಿಗೆ ಡಿಮ್ಯಾಂಡ್ ಹೆಚ್ಚಿದೆ.

Related Stories

No stories found.

Advertisement

X
Kannada Prabha
www.kannadaprabha.com