ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಕಡಿಮೆ ಮಾಡಲು ಚಿಂತನೆ: ಸಿಎಂ ಕುಮಾರಸ್ವಾಮಿ

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಕಡಿಮೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು...
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಕಡಿಮೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿಯೇ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅತಿ ಕಡಿಮೆ ಸೆಸ್ ವಿಧಿಸಲಾಗುತ್ತಿದೆ. ಆದಾಗ್ಯೂ ಜನರ ಮೇಲಿನ ಹೊರೆ ತಗ್ಗಿಸಲು ಸೆಸ್ ಕಡಿಮೆ ಮಾಡುವ ಚಿಂತನೆ ಇದೆ ಎಂದರು.
ಸೆಸ್ ಕಡಿಮೆ ಮಾಡುವ ಬಗ್ಗೆ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com