ಭಾರತ್ ಬಂದ್ ಗೆ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ: ಸಹಜ ಸ್ಥಿತಿಯತ್ತ ಜನಜೀವನ

ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಹಾಗೂ ಹಲವು ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಭಾರತ್ ಬಂದ್ ಗೆ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ: ಸಹಜ ಸ್ಥಿತಿಯತ್ತ ಸಾರ್ವಜನಿಕ ಜೀವನ
ಭಾರತ್ ಬಂದ್ ಗೆ ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ: ಸಹಜ ಸ್ಥಿತಿಯತ್ತ ಸಾರ್ವಜನಿಕ ಜೀವನ
ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷ ಹಾಗೂ ಹಲವು ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಾಜ್ಯದ ಬಹುತೇಕ ಕಡೆಗಳಲ್ಲಿ ಬಂದ್ ಶಾಂತಿಯುತವಾಗಿ ನಡೆಯಿತಾದರೂ, ಉಡುಪಿ ಭಾಗದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ  ಘರ್ಷಣೆಗಳು ನಡೆದಿದೆ.  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ಖಾಸಗಿ ಹಾಗೂ ಸರ್ಕಾರಿ ಬಸ್ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿತ್ತು. ಆದರೆ ಮೆಟ್ರೋ ಸಂಚಾರ ಎಂದಿನಂತೆ ಇದ್ದದ್ದು ಪ್ರಯಾಣಿಕರಿಗೆ ಸ್ವಲ್ಪ ಮಟ್ಟಿಗಿನ ಅನುಕೂಲವಾಗಿತ್ತು. 
ಕೆಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳನ್ನು ಒತ್ತಾಯ ಪೂರ್ವಕವಾಗಿ ಮುಚ್ಚಿಸಿರುವ ಘಟನೆಯೂ ನಡೆದಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಬಂದ್ ಗೆ ಪ್ರತಿಕ್ರಿಯೆ ದೊರೆಯದೇ ಮಿಶ್ರ ಪ್ರಕ್ರಿಯೆ ಸಿಕ್ಕಿದ್ದು, ಸಂಜೆ ವೇಳೆಗೆ ಜನಜೀವನ ಸಹಜ ಸ್ಥಿತಿಗೆ ಮರಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com