ಕ್ರಿಕೆಟಿಗ ರವೀಂದ್ರ ಜಡೇಜಾ ರನ್ ಗಳಿಕೆಗಿಂತ ಭಾರತದಲ್ಲಿ ಪೆಟ್ರೋಲ್ ದರವೇ ಅಧಿಕ: ರಮ್ಯಾ ಟ್ವೀಟ್

ಕ್ರಿಕೆಟಿಗ ರವೀಂದ್ರ ಜಡೇಜಾ ರನ್ ಗಳಿಕೆಗಿಂತ ಭಾರತದಲ್ಲಿ ಪೆಟ್ರೋಲ್ ದರವೇ ಅಧಿಕವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹಾಗೂ ನಟಿ ರಮ್ಯಾ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ಕ್ರಿಕೆಟಿಗ ರವೀಂದ್ರ ಜಡೇಜಾ ರನ್ ಗಳಿಕೆಗಿಂತ ಭಾರತದಲ್ಲಿ ಪೆಟ್ರೋಲ್ ದರವೇ ಅಧಿಕವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹಾಗೂ ನಟಿ ರಮ್ಯಾ ಹೇಳಿದ್ದಾರೆ.
ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಿಂದ ಭಾರತ್ ಬಂದ್ ಕರೆ ನೀಡಲಾಗಿದ್ದು, ಇಂದು ದೇಶಾದ್ಯಂತ ಬಂದ್ ಆಚರಣೆ ಮಾಡಲಾಗುತ್ತಿದೆ. ಇದರ ಬೆನ್ನಲ್ಲೇ ರಮ್ಯಾ ಟ್ವೀಟ್ ಸುದ್ದಿಗೆ ಗ್ರಾಸವಾಗಿದೆ. ಭಾರತೀಯ ಕ್ರಿಕೆಟ್ ತಂಡದ ಆಟಗಾರ ರವೀಂದ್ರ ಜಡೇಜಾ ಇಂಗ್ಲೆಂಡ್ ವಿರುದ್ಧ ಗಳಿಸಿದ ರನ್ ಗಿಂತ ಭಾರತದಲ್ಲಿ ಪೆಟ್ರೋಲ್ ದರವೇ ದುಬಾರಿ ಎನ್ನುವ ಮೂಲಕ ಮಾಜಿ ಸಂಸದೆ ರಮ್ಯಾ ಟ್ವಿಟ್ಟರ್ ನಲ್ಲಿ ಕೇಂದ್ರ ಸರ್ಕಾರದ ಕಾಲೆಳೆದಿದ್ದಾರೆ.
'ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಪರ ವೈಯಕ್ತಿಕವಾಗಿ ರವೀಂದ್ರ ಜಡೇಜಾರವರು 86 ರನ್ ಗಳಿಸಿದ್ದಾರೆ. ಆದರೆ ಅವರು ಗಳಿಸಿದ್ದು ಭಾರತದಲ್ಲಿ 2ನೇ ಅತ್ಯಧಿಕ ರನ್ ಆಗಿದೆ. ಮೊದಲನೇಯ ಅತ್ಯಧಿಕ ರನ್ ಭಾರತದ ಪೆಟ್ರೋಲ್ ದರ. ಭಾರತದಲ್ಲಿ ಪೆಟ್ರೋಲ್ ದರವೇ 87 ಆಗಿದೆ ಎಂದು ರಮ್ಯಾ ವ್ಯಂಗ್ಯ ಮಾಡಿದ್ದಾರೆ.
ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೋಮವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ಬಹುತೇಕ ಸಾರಿಗೆ ವ್ಯವಸ್ಥೆ ಸ್ತಭ್ದವಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬಂದ್ ಬಹುತೇಕ ಯಶಸ್ವಿಯಾಗಿದ್ದು, ಅಂಗಡಿ ಮುಗ್ಗಟ್ಟುಗಳು ಮುಚ್ಚಿವೆ. ಬೇರೆ ಊರಿನಿಂದ ಬಂದ ಪ್ರಯಾಣಿಕರು ತಮ್ಮ ತಮ್ಮ ಸ್ಥಳಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com