ಎಸಿಬಿ ನ್ಯಾಯೋಚಿತ ತನಿಖೆ ನಡೆಸಲು ಸಾಧ್ಯವಿಲ್ಲ: ಲೋಕಾಯುಕ್ತ

ರಾಜ್ಯಸರ್ಕಾರದ ನಿಯಂತ್ರಣದಲ್ಲಿರುವ ಭ್ರಷ್ಟಾಚಾರ ನಿಗ್ರಹ ದಳ ಉನ್ನತ ಮಟ್ಟದ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ವಿಚಾರಣೆಗಳನ್ನು ನ್ಯಾಯೋಚಿತವಾಗಿ ನಡೆಸಲು ಸಾಧ್ಯವಿಲ್ಲ ಎಂದು ಲೋಕಾಯುಕ್ತ ಹೈಕೋರ್ಟ್ ನಲ್ಲಿ ಪ್ರತಿಪಾದಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯಸರ್ಕಾರದ ನಿಯಂತ್ರಣದಲ್ಲಿರುವ ಭ್ರಷ್ಟಾಚಾರ ನಿಗ್ರಹ ದಳ ಉನ್ನತ ಮಟ್ಟದ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ವಿಚಾರಣೆಗಳನ್ನು ನ್ಯಾಯೋಚಿತವಾಗಿ ನಡೆಸಲು ಸಾಧ್ಯವಿಲ್ಲ ಎಂದು ಲೋಕಾಯುಕ್ತ  ಹೈಕೋರ್ಟ್ ನಲ್ಲಿ ಪ್ರತಿಪಾದಿಸಿದೆ.

ಲೋಕಾಯುಕ್ತದ ಅಡಿಯಲ್ಲಿ ಕೆಲಸ ಮಾಡುವ ಪೊಲೀಸ್ ಅಧಿಕಾರಿಗಳು ಸ್ವತಂತ್ರವಾಗಿರುತ್ತಾರೆ ಆದರೆ. ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಸ್ವತಂತ್ರವಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ಜನಪ್ರತಿನಿಧಿಗಳ ರಾಜಕೀಯ  ಹಿತಾಸಕ್ತಿ ವಿರುದ್ಧವಾಗಿಯೂ ಕ್ರಮ ಕೈಗೊಳ್ಳಲು ಸಾಧ್ಯವಿರುವುದಿಲ್ಲ ಎಂದು ಹೇಳಲಾಗಿದೆ.

 ಎಸಿಬಿ ರಚನೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಯುತ್ತಿರುವ ಮುಖ್ಯ ನ್ಯಾಯಾಧೀಶ ದಿನೇಶ್  ಮಹೇಶ್ವರಿ ಮತ್ತು  ನ್ಯಾಯಾಧೀಶ ಬಿ.ಎಂ. ಶ್ಯಾಮ್ ಪ್ರಸಾದ್ ಅವರನ್ನೊಳಗೊಂಡ ಪೀಠದ ಮುಂದೆ ಲೋಕಾಯುಕ್ತ ಪರ ಹಿರಿಯ ವಕೀಲರು  ಈ ವಿಷಯ ಮಂಡಿಸಿದ್ದಾರೆ.

ರಾಜ್ಯ ಲೋಕಾಯುಕ್ತ ಕಾಯ್ದೆ ಪ್ರಕಾರ ಮತ್ತೊಂದು ತನಿಖಾ ಸಂಸ್ಥೆಗೆ ಅವಕಾಶವಿಲ್ಲ. ಅದು ಸಂವಿಧಾನದ  14 ಮತ್ತು 21 ವಿಧಿಯಡಿ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಎಸಿಬಿ ಕೂಡಾ ಸ್ವತಂತ್ರ ಸಂಸ್ಥೆಯಾಗಿದ್ದು,  ನ್ಯಾಯೋಚಿತವಾಗಿ ತನಿಖೆ ನಡೆಸಲು ಅವಕಾಶ ಮಾಡಿಕೊಡಲಾಗಿದೆ ಎಂದು  ಹೆಚ್ಚುವರಿ ಅಡ್ವೊಕೆಟ್ ಜನರಲ್ ಎ.ಎಸ್. ಪೊನ್ನಣ್ಣ ಸರ್ಕಾರದ ಪರ ವಾದಿಸಿದರು.  ವಿಚಾರಣೆಯನ್ನು ಸೆಪ್ಟೆಂಬರ್ 25ಕ್ಕೆ  ನ್ಯಾಯಾಲಯ ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com