7,000 ಸಾವಿರ ಪಿಒಪಿ ಗಣೇಶ ಮೂರ್ತಿಗಳ ವಿಸರ್ಜನೆ

ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಕೂಡ ಒಂದು 1 ಲಕ್ಷಕ್ಕೂ ಅಧಿಕ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದ್ದು, ಇದರಲ್ಲಿ 7 ಸಾವಿರಕ್ಕೂ ಅಧಿಕ ಪಿಒಪಿ ಗಣೇಶ ಮೂರ್ತಿಗಳಾಗಿದ್ದವು ಎಂದು ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಕೂಡ ಒಂದು 1 ಲಕ್ಷಕ್ಕೂ ಅಧಿಕ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದ್ದು, ಇದರಲ್ಲಿ 7 ಸಾವಿರಕ್ಕೂ ಅಧಿಕ ಪಿಒಪಿ ಗಣೇಶ ಮೂರ್ತಿಗಳಾಗಿದ್ದವು ಎಂದು ತಿಳಿದುಬಂದಿದೆ. 
ಬಿಬಿಎಂಪಿಯ ಎಂಟು ವಲಯಗಳಲ್ಲಿ ಶನಿವಾರ ಒಟ್ಟಾರೆ 1.19ಲಕ್ಷಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ. ಹಬ್ಬದ ದಿನ ಗುರುವಾರ 1.69 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿತ್ತು. ನಂತರ 2ನೇ ದಿನ ಶುಕ್ರವಾರ 15 ಸಾವಿರ ಗಣೇಶ ಮೂರ್ತಿಗಳನ್ನು ವಿವಿಧ ಕೆರೆ, ಕಲ್ಯಾಣಿ ಮತ್ತು ಮೊಬೈಲ್ ಟ್ಯಾಂಕರ್ ಗಳಲ್ಲಿ ವಿಸರ್ಜನೆ ಮಾಡಲಾಗಿತ್ತು. 
ಇದೀಗ ಒಟ್ಟು ಮೊದಲ ಮೂರು ದಿನಗಳಲ್ಲಿ ಒಟ್ಟು 3.5 ಲಕ್ಷ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 
ಇನ್ನು ಶನಿವಾರ ವಿಸರ್ಜಿಸಲಾಗದ 1.19ಲಕ್ಷ ಗಣೇಶ ಮೂರ್ತಿಗಳಲ್ಲಿ 7 ಸಾವಿರಕ್ಕೂ ಹೆಚ್ಚು ಪಿಒಪಿ ಗಣೇಶ ಮೂರ್ತಿಗಳಾಗಿದ್ದವು. ಇದರಿಂದ ಹಬ್ಬದ ದಿನ ವಿಸರ್ಜಿಸಲಾಗಿದ್ದ 14 ಸಾವಿರ ಪಿಒಪಿ ಗಣೇಶ ಮೂರ್ತಿಗಳು, ನಂತರ ಶುಕ್ರವಾರ ವಿಸರ್ಜಿಸಲಾಗಿದ್ದ 1,700ಕ್ಕೂ ಹೆಚ್ಚು ಪಿಒಪಿ ಗಣೇಶ ಮೂರ್ತಿಗಳು ಸೇರಿ ಒಟ್ಟು ಸಂಖ್ಯೆ 20 ಸಾವಿರ ಗಡಿ ದಾಟಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com