ಡಿಕೆಶಿಗೆ ಮತ್ತೆ ಸಂಕಷ್ಟ, ಎಫ್ಐಆರ್ ದಾಖಲಿಸಿದ ಇಡಿ, ಬಂಧನ ಭೀತಿ!

ರಾಜ್ಯ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿದ್ದು ಡಿಕೆಶಿಗೆ ಬಂಧನ ಭೀತಿ ಎದುರಾಗಿದೆ...
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಬೆಂಗಳೂರು: ರಾಜ್ಯ ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿದ್ದು ಡಿಕೆಶಿಗೆ ಬಂಧನ ಭೀತಿ ಎದುರಾಗಿದೆ. 
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ಇಡಿ ಪ್ರಕರಣ ದಾಖಲಿಸಿಕೊಂಡಿದ್ದರಿಂದ ಡಿಕೆಶಿಗೆ ಬಂಧನದ ಭೀತಿ ಎದುರಾಗಿದ್ದು ಹಿರಿಯ ವಕೀಲರ ಜೊತೆ ಕಾನೂನು ಪ್ರಕ್ರಿಯೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. 
ಡಿಕೆ ಶಿವಕುಮಾರ್ ಸೇರಿದಂತೆ ಸಚಿನ್ ನಾರಾಯಣ್, ಶರ್ಮಾ ಟ್ರಾವೆಲ್ಸ್ ನ ಸುನೀಲ್ ಕುಮಾರ್ ಶರ್ಮ, ದೆಹಲಿಯ ಕರ್ನಾಟಕ ಭವನದ ಸಿಬ್ಬಂದಿ ಆಂಜನೇಯ ಹನುಮಂತಯ್ಯ ಮತ್ತು ರಾಜ್ಯ ಸರ್ಕಾರದ ನಿವೃತ್ತ ಸಿಬ್ಬಂದಿ ರಾಜೇಂದ್ರ ಅವರನ್ನು ಆರೋಪಿಗಳನ್ನಾಗಿಸಿ ಪ್ರಕರಣ ದಾಖಲಿಸಲಾಗಿದೆ.
ದೆಹಲಿಯ ನಿವಾಸದಲ್ಲಿ 8.5 ಕೋಟಿ ರುಪಾಯಿ ಹಣ ಸಿಕ್ಕಿದ್ದು ಈ ಸಂಬಂಧ ಆದಾಯ ತೆರಿಗೆ ಇಲಾಖೆ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ದೂರು ನೀಡಿತ್ತು. ಆದಾಯ ತೆರಿಗೆ ಇಲಾಖೆಯ ದಾಳಿ ವೇಳೆ ಸಿಕ್ಕ ಮಾಹಿತಿ ಆಧರಿಸಿ ನೀಡಿರುವ ದೂರಿನಲ್ಲಿ ಹವಾಲ ಹಣದ ವಿವರವನ್ನು ಉಲ್ಲೇಖಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com