ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿಲ್ಲ; ರಾಜನಾಥ್ ಸಿಂಗ್

ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯದಂತಹ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ...
ಬೆಂಗಳೂರಿನಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಮತ್ತು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರಿನಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಮತ್ತು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯದಂತಹ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್ ನಿರಾಕರಿಸಿದ್ದಾರೆ.

ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ ಕೇಸು ದಾಖಲಿಸಿದ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಅವರು ನಿನ್ನೆ ಬೆಂಗಳೂರಿನಲ್ಲಿ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಬಿಐ ಅಥವಾ ಜಾರಿ ನಿರ್ದೇಶನಾಲಯ ಯಾರಿಗೂ ಅಂತಹ ಕಿರುಕುಳ ನೀಡಲು ಸಾಧ್ಯವಿಲ್ಲ. ಅಂತಹ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ಹೇಳಿದರು.

ಬೇರೆ ರಾಜಕೀಯ ಪಕ್ಷಗಳ ನಾಯಕರಿಗೆ ಕಿರುಕುಳ ನೀಡಲು ಕೇಂದ್ರ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಇತ್ತೀಚೆಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನ ಹಿರಿಯ ನಾಯಕರು ಆರೋಪಿಸಿದ್ದರು.ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಕೂಡ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಆರೋಪಿಸಿದ್ದರು.

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ರಾಜನಾಥ್ ಸಿಂಗ್, ಇಂತಹ ಆರೋಪಗಳನ್ನು ಮಾಡುವುದನ್ನು ನಿಲ್ಲಿಸಿ, ಈ ರೀತಿ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com