ಭೂ ಒತ್ತುವರಿ ಆಪಾದನೆ ಕುರಿತು ಸಿಎಂ ಕುಮಾರಸ್ವಾಮಿ ಏಕೆ ಮೌನವಾಗಿದ್ದಾರೆ: ಬಿಎಸ್ ವೈ ಪ್ರಶ್ನೆ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕುಟುಂಬದವರು ಅತಿಕ್ರಮಣ ಮಾಡಿಕೊಂಡಿರುವ ಭೂಮಿ ...
ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕುಟುಂಬದವರು ಅತಿಕ್ರಮಣ ಮಾಡಿಕೊಂಡಿರುವ ಭೂಮಿ ಸುಮಾರು 3 ಸಾವಿರ ಕೋಟಿ ರೂಪಾಯಿ ಬೆಲೆ ಬಾಳುವುದಾಗಿದೆ, ಈ ಬಗ್ಗೆ ತನಿಖೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ತಮ್ಮ ಕುಟುಂಬದವರ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬರುತ್ತಿದ್ದರೂ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಏಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಈ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮೌನವಾಗಿದ್ದರೆ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಅವರು ಇದನ್ನು ಹಗುರವಾಗಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಶಾಸಕ ಹಾಗೂ ಸಚಿವ ಎ ಮಂಜು ಇತ್ತೀಚೆಗೆ ಹಾಸನ ಜಿಲ್ಲಾಧಿಕಾರಿಗೆ ದೂರು ನೀಡಿ, ಹಾಸನ ಜಿಲ್ಲೆಯ ಗ್ರಾಮವೊಂದರಲ್ಲಿ ದೇವೇಗೌಡ ಕುಟುಂಬದವರು ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಬಿಜೆಪಿ ಬೀದಿಗಿಳಿದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com