ವಿಧಾನಸೌಧ ಕಾರಿಡಾರ್ ನಲ್ಲಿ ಸುಮ್ಮನೆ ಸುತ್ತಾಡಬೇಡಿ: ವಿಸಿ, ರಿಜಿಸ್ಟ್ರಾರ್ ಗಳಿಗೆ ಸಚಿವ ಜಿಟಿ ದೇವೇಗೌಡ ತಾಕೀತು

ವಿಧಾನ ಸೌಧಕ್ಕೆ ಭೇಟಿ ನೀಡಬೇಕಾದರೆ ಉನ್ನತ ಶಿಕ್ಷಣ ಇಲಾಖೆಯ ಅನುಮತಿ ಪಡೆಯಬೇಕೆಂದು ...
ಕರ್ನಾಟಕ ಸಂಸ್ಕೃತಿ ವಿಶ್ವವಿದ್ಯಾಲಯ ಹೊಸ ಕಟ್ಟಡ ಉದ್ಘಾಟನೆಯಲ್ಲಿ ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಮತ್ತು ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ
ಕರ್ನಾಟಕ ಸಂಸ್ಕೃತಿ ವಿಶ್ವವಿದ್ಯಾಲಯ ಹೊಸ ಕಟ್ಟಡ ಉದ್ಘಾಟನೆಯಲ್ಲಿ ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಮತ್ತು ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ

ಬೆಂಗಳೂರು: ವಿಧಾನ ಸೌಧಕ್ಕೆ ಭೇಟಿ ನೀಡಬೇಕಾದರೆ ಉನ್ನತ ಶಿಕ್ಷಣ ಇಲಾಖೆಯ ಅನುಮತಿ ಪಡೆಯಬೇಕೆಂದು ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಮತ್ತು ರಿಜಿಸ್ಟ್ರಾರ್ ಹಾಗೂ ಇತರ ಅಧಿಕಾರಿಗಳಿಗೆ ಉನ್ನತ ಶಿಕ್ಷಣ ಸಚಿವರು ತಾಕೀತು ಮಾಡಿದ್ದಾರೆ.

ವಿಧಾನ ಸೌಧದ ಕಾರಿಡಾರ್ ಗಳಲ್ಲಿ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು, ರಿಜಿಸ್ಟ್ರಾರ್ ಗಳು ಮತ್ತು ಇತರ ಅಧಿಕಾರಿಗಳು ಸುಮ್ಮನೆ ತಿರುಗಾಡುತ್ತಿದ್ದಾರೆ. ಈ ಬಗ್ಗೆ ಸಾಕಷ್ಟು ದೂರುಗಳು ಬಂದ ಹಿನ್ನಲೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸಚಿವ ಜಿ ಟಿ ದೇವೇಗೌಡ ಆದೇಶ ನೀಡಿ ಅಧಿಕೃತ ಕೆಲಸವಿದ್ದರೆ ಮಾತ್ರ ವಿಧಾನಸೌಧಕ್ಕೆ ಬರಬೇಕು, ಅದು ಕೂಡ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿಯೇ ಬರಬೇಕು ಎಂದು ಆದೇಶ ನೀಡಿದ್ದಾರೆ.

''ನನ್ನ ಕಚೇರಿಗೆ ಮತ್ತು ವಿಧಾನಸೌಧ ಕಾರಿಡಾರ್ ಗಳಿಗೆ ಅನಗತ್ಯವಾಗಿ ವಿಸಿಗಳು, ರಿಜಿಸ್ಟ್ರಾರ್ ಗಳು ಭೇಟಿ ನೀಡುತ್ತಿರುತ್ತಾರೆ ಎಂದು ಸಾಕಷ್ಟು ಬಾರಿ ನನಗೆ ದೂರುಗಳು ಬಂದಿವೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು ಶೈಕ್ಷಣಿಕ ಬೆಳವಣಿಗೆಗಳ ಬಗ್ಗೆ ವಿಸಿ, ರಿಜಿಸ್ಟ್ರಾರ್ ಗಳು ಮತ್ತು ಅಧಿಕಾರಿಗಳು ವಿಧಾನಸೌಧಕ್ಕೆ ಬರಬೇಕು, ಅನಗತ್ಯವಾಗಿ ಬರಬೇಡಿ ಎಂದು ತಾಕೀತು ಮಾಡಿದ್ದೇನೆ'' ಎನ್ನುತ್ತಾರೆ.

ಕೆಲವು ಉಪ ಕುಲಪತಿಗಳು ವಿಧಾನ ಸೌಧಕ್ಕೆ ಸಚಿವರ ಕಚೇರಿಗೆ ಭೇಟಿ ನೀಡಿ ರಿಜಿಸ್ಟ್ರಾರ್ ಗಳ ವರ್ಗಾವಣೆ ವಿಚಾರದಲ್ಲಿ ಮತ್ತು ವಿವಿಗಳ ಸಿಂಡಿಕೇಟ್ ಸದಸ್ಯರ ಹುದ್ದೆಗಳಿಗೆ ಆಕಾಂಕ್ಷಿಗಳಿಗೆ ಲಾಬಿ ನಡೆಸಲಾಗುತ್ತಿದೆ ಎಂಬ ಆರೋಪಗಳು ಸಚಿವರಿಗೆ ಕೇಳಿಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com