ಸಾಲ ಕಟ್ಟದ್ದಕ್ಕೆ ಮಹಿಳೆಯನ್ನು ಬಲವಂತದಿಂದ ಎಳೆದೊಯ್ದ ಮಾಲೀಕ: ವೀಡಿಯೋ ವೈರಲ್

ಸಾಲದ ಹಣವನ್ನು ಮರು ಪಾವತಿ ಮಾಡಿಲ್ಲ ಎಂಬ ಕಾರಣಕ್ಕಾಗಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿ ಎಳೆದಾಡಿ, ಬಲವಂತವಾಗಿ ಕಾರಿನಲ್ಲಿ ಎಳೆದೊಯ್ದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಹೋಬಳಿ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮೈಸೂರು: ಸಾಲದ ಹಣವನ್ನು ಮರು ಪಾವತಿ ಮಾಡಿಲ್ಲ ಎಂಬ ಕಾರಣಕ್ಕಾಗಿ ವ್ಯಕ್ತಿಯೊಬ್ಬ ಮಹಿಳೆಯೊಬ್ಬರನ್ನು ಸಾರ್ವಜನಿಕವಾಗಿ ಎಳೆದಾಡಿ, ಬಲವಂತವಾಗಿ ಕಾರಿನಲ್ಲಿ ಎಳೆದೊಯ್ದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಹೋಬಳಿ ಬೆಕ್ಕಳಲೆ ಗ್ರಾಮದಲ್ಲಿ ಗುರುವಾರ ನಡೆದಿದೆ. 
ಮಹಿಳೆಯನ್ನು ಎಳೆದೊಯ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಆತಂಕಗೊಂಡ ಆರೋಪಿ ಮಹಿಳೆಯನ್ನು ನಂತರ ಬಿಡುಗಡೆ ಮಾಡಿದ್ದಾನೆ. 
ಮೂಲತಃ ತಮಿಳುನಾಡಿನವರಾದ ಚಿನ್ನತಂಬಿ ಹಾಗೂ ಆತನ ಪತ್ನಿ ಜಾನಕಮ್ಮ ಎಂಬುವವರನ್ನು ರೂ.50 ಸಾವಿರ ಸಾಲ ನೀಡಿ ಮದ್ದೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಸ್ ನಾಗೇಶ್ 16 ವರ್ಷಗಳಿಂದ ಮದ್ದೂರು ತಾಲೂಕಿನ ಕುದರಗುಂಡಿ ಗ್ರಾಮದಲ್ಲಿ ಜೀತಕ್ಕೆ ಇರಿಸಿಕೊಂಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. 
ಚಿನ್ನತಂಬಿ ಕೆಲ ತಿಂಗಳ ಹಿಂದೆ ತೀರಿಕೊಂಡಿದ್ದು, ಬಳಿಕ ನಾಗೇಶ್ ಕಾಟ ತಾಳಲಾರದೆ ಜಾನಕಮ್ಮ ತನ್ನ ಇಬ್ಬರು ಮಕ್ಕಳೊಂದಿಗೆ ಅಲ್ಲಿಂದ ತಪ್ಪಿಸಿಕೊಂಡು ಬಂದು ಬೆಕ್ಕಳಲೆ ಗ್ರಾಮದಲ್ಲಿ ವಾಸವಿದ್ದರು ಎನ್ನಲಾಗಿದೆ. 
ಜಾನಕಮ್ಮ ಇರುವ ಜಾಗವನ್ನು ಪತ್ತೆ ಹಚ್ಚಿದ ಆರೋಪಿ ನಾಗೇಶ ಗುರುವಾರ ತನ್ನ ಬೆಂಬಲಿಗರೊಂದಿಗೆ ಆಗಮಿಸಿ, ಆಕೆಯ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಅವರನ್ನು ಅಪಹರಿಸಿದ್ದ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com