ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟತೆಯನ್ನು ಹೆಚ್ಚಿಸಿ: ಜಿ.ಟಿ.ದೇವೇಗೌಡಗೆ ಉಪ ಮುಖ್ಯಮಂತ್ರಿ ಪರಮೇಶ್ವರ್

ರಾಜ್ಯ ಸರ್ಕಾರದ ನೇತೃತ್ವದಲ್ಲಿ ಮುನ್ನಡೆಯಲಾಗುತ್ತಿರುವ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣದ ಗುಣಮಟ್ಟತೆಯನ್ನು ಉತ್ತಮವಾಗಿಸುವಂತೆ ರಾಜ್ಯ ಹೆಚ್ಚುವರಿ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರಿಗೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್...
ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್
ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್
ಬೆಂಗಳೂರು: ರಾಜ್ಯ ಸರ್ಕಾರದ ನೇತೃತ್ವದಲ್ಲಿ ಮುನ್ನಡೆಯಲಾಗುತ್ತಿರುವ ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಣದ ಗುಣಮಟ್ಟತೆಯನ್ನು ಉತ್ತಮವಾಗಿಸುವಂತೆ ರಾಜ್ಯ ಹೆಚ್ಚುವರಿ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರಿಗೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಶನಿವಾರ ಸೂಚಿಸಿದ್ದಾರೆ. 
ಈ ಕುರಿತಂತೆ ಜಿ.ಟಿ.ದೇವೇಗೌಡ ಅವರಿಗೆ ಪತ್ರ ಬರೆದಿರುವ ಪರಮೇಶ್ವರ್ ಅವರು, ಪತ್ರದಲ್ಲಿ ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಹೇಳಿದ್ದು, ಕೂಡಲೇ ಈ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚಿಸಿದ್ದಾರೆ. 
ಪತ್ರದಲ್ಲಿ ಪರಮೇಶ್ವರ್ ಅವರು, ಶಿಕ್ಷಣದ ಗುಣಮಟ್ಟ ಕುಸಿಯುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದು, ವಿಶ್ವವಿದ್ಯಾಲಯಗಳ ಆವರಣದಲ್ಲಿ ಭ್ರಷ್ಟಾಚಾರ ಹಾಗೂ ರಾಜಕೀಯ ನಡೆಯುತ್ತಿರುವುದನ್ನು ಪ್ರಸ್ತಾಪ ಮಾಡಿದ್ದಾರೆಂದು ಮೂಲಗಳು ತಿಳಿಸಿದ್ದಾರೆ. 
ಈ ಕುರಿತು ದೇವೇಗೌಡ ಅವರ ಬಳಿ ಪ್ರತಿಕ್ರಿಯೆ ಕೇಳಿದಾಗ, ನನಗೆ ಅಂತಹ ಯಾವುದೇ ಪತ್ರಗಳೂ ಬಂದಿಲ್ಲ. ಉಪ ಮುಖ್ಯಮಂತ್ರಿಗಳು ಶಿಕ್ಷಣದ ಗುಣಮಟ್ಟದ ಬಗ್ಗೆ ಮಾತನಾಡಿದ್ದಾರೆಂಬುದರ ಬಗ್ಗೆ ಮಾಹಿತಿ ಬಂದಿದೆ. ವಿಶ್ವವಿದ್ಯಾಲಯವೊಂದರಲ್ಲಿ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿತ್ತು. ಈ ಕುರಿತು ಪರಿಶೀಲನೆ ನಡೆಸುತ್ತೇನೆ. ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇನೆಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com