

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ವಿಧಾನಸೌಧ, ಆಡುಗೋಡಿ, ಜೆಪಿ ನಗರ, ಶಾಂತಿ ನಗರ, ಮೆಜೆಸ್ಟಿಕ್ ಸೇರಿದಂತೆ ನಗರದ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ.ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು ನಿವಾಸಿಗರು ತೀವ್ರ ತೊಂದರೆ ಎದುರಿಸುವಂತಾಗಿದೆ.
ಭಾರೀ ಮಳೆಯಿಂದಾಗಿ ಜೆಪಿನಗರದ ಡಾಲರ್ಸ್ ಕಾಲೋನಿ, ಬಿರೇಶ್ವರ ನಗರ ಸೇರಿದಂತೆ ಹಲವು ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು ನೀರನ್ನು ಹೊರಹಾಕಲು ನಿವಾಸಿಗಳು ಹರಸಾಹಸಪಡುವಂತಾಯಿತು .ಗಿರಿನಗರದ ಮೂರನೇ ಬ್ಲಾಕ್ ನಲ್ಲಿ ವಿದ್ಯುತ್ ಕಂಬವೊಂದು ಬಿದ್ದ ಪರಿಣಾಮ ಮರಕ್ಕೆ ವಿದ್ಯುತ್ ತಗುಲಿರುವ ಘಟನೆ ನಡೆದಿದೆ.