ನಗರದಲ್ಲಿನ ರಸ್ತೆ ಗುಂಡಿಗಳಿಂದ ಸಾರ್ವಜನಿಕರು ಸಾವು ನೋವುಗಳಿಗೆ ಈಡಾಗುತ್ತಿದ್ದಾರೆಂದು ಆಕ್ಷೇಪಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ದಿನೇಸ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್.ಡಿ.ಪಂಡಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಮುಚ್ಚಿರುವ ರಸ್ತೆ ಗುಂಡಿಗಳನ್ನು ಪರಿಶೀಲನೆ ನಡೆಸಲು ಮಿಲಿಟರಿ ಇಂಜಿನಿಯರಿಂಗ ಸರ್ವೀಸಸ್ ನ ಮುಖ್ಯಸ್ಥರಾದ ದಿನೇಶ್ ಅಗರ್ವಾಲ್, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಜಿ ಉಮಾ ನೇತೃತ್ವದಲ್ಲಿ ನ್ಯಾಯಾಲಯದ ಆಯೋಗ ನೇಮಿಸಿ ಆದೇಶಿಸಿದರು.