ರೈತರ ಸಾಲಮನ್ನಾ ವ್ಯಾಪ್ತಿಯನ್ನು ವಿಸ್ತರಿಸಿದ ರಾಜ್ಯ ಸರ್ಕಾರ; ಯೋಜನೆಗೆ ತಿದ್ದುಪಡಿ

ರಾಜ್ಯ ಸರ್ಕಾರದ ಸಾಲಮನ್ನಾ ಯೋಜನೆ ತಿದ್ದುಪಡಿ ಪ್ರಕಾರ ಸಹಕಾರಿ ಬ್ಯಾಂಕುಗಳು ಮತ್ತು ...
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ಬೆಂಗಳೂರು: ರಾಜ್ಯ ಸರ್ಕಾರದ ಸಾಲಮನ್ನಾ ಯೋಜನೆ ತಿದ್ದುಪಡಿ ಪ್ರಕಾರ ಸಹಕಾರಿ ಬ್ಯಾಂಕುಗಳು ಮತ್ತು ಸೊಸೈಟಿಗಳಲ್ಲಿ ಠೇವಣಿಯಿಟ್ಟಿರುವ ರೈತರುಗಳು ಕೂಡ ಒಂದು ಲಕ್ಷದವರೆಗೆ ಸಾಲ ಪಡೆಯಬಹುದು. ಸಹಕಾರಿ ಬ್ಯಾಂಕುಗಳಲ್ಲಿ ಮತ್ತು ಸೊಸೈಟಿಗಳಲ್ಲಿ ಸಾಲಮನ್ನಾ ಯೋಜನೆಗೆ ಇರುವ ನಿಯಮಗಳ ತಿದ್ದುಪಡಿ ಮಾಡಿ ಈ ಬಗ್ಗೆ ರಾಜ್ಯ ಸಮ್ಮಿಶ್ರ ಸರ್ಕಾರ ನಿನ್ನೆ ಹೊಸ ಆದೇಶ ಹೊರಡಿಸಿದೆ.

ಸಹಕಾರಿ ಬ್ಯಾಂಕುಗಳಲ್ಲಿ ರೈತರು ಎಷ್ಟೇ ಹಣ ಠೇವಣಿ ಇಟ್ಟಿದ್ದರೂ ಅವರಿಗೆ ಸಾಲಮನ್ನಾ ಅನ್ವಯವಾಗಲಿದೆ. ಈ ಹಿಂದೆ ಸಹಕಾರಿ ಬ್ಯಾಂಕುಗಳಲ್ಲಿ ಹಣ ಠೇವಣಿ ಇಟ್ಟಿದ್ದರೆ ಅಂತಹ ರೈತರು ಸಾಲಮನ್ನಾ ವ್ಯಾಪ್ತಿಗೆ ಒಳಪಡುತ್ತಿರಲಿಲ್ಲ. ಹಾಗಾಗಿ ಹಿಂದಿನ ಸರ್ಕಾರಿ ಆದೇಶವನ್ನು ಮಾರ್ಪಾಡು ಮಾಡಿ ಹೊಸ ಆದೇಶ ಹೊರಡಿಸಿದ್ದೇವೆ ಎಂದು ಸಹಕಾರಿ ಖಾತೆ ಸಚಿವ ಬಂಡೆಪ್ಪ ಕಾಶೆಂಪೂರ ತಿಳಿಸಿದ್ದಾರೆ.

ರೈತರು ಸಹಕಾರ ಸಂಘಗಳಲ್ಲಿ ಠೇವಣಿ ಇಟ್ಟಿದ್ದರೆ ಸಾಲಮನ್ನಾ ಸಂದರ್ಭದಲ್ಲಿ ಅಂತಹ ಮೊತ್ತವನ್ನು ಹೊರ ಬಾಕಿಯಲ್ಲಿ ಕಳೆಯಬೇಕು ಎಂಬ ಷರತ್ತನ್ನು ಕೈಬಿಡಲು ನಿರ್ಧರಿಸಲಾಗಿದೆ. ಪರಿಷ್ಕೃತ ಆದೇಶ ಹೊರಬಿದ್ದಿದೆ ಎಂದು ತಿಳಿಸಿದರು. ಮುಂದಿನ ಜುಲೈ ತಿಂಗಳ ಒಳಗಾಗಿ ಸಹಕಾರ ಬ್ಯಾಂಕುಗಳ ರೈತರ ಸಂಪೂರ್ಣ ಸಾಲಮನ್ನಾ ಆಗಲಿದೆ. ಈಗಾಗಲೇ ಪ್ರತಿ ತಿಂಗಳು ಸರ್ಕಾರ ಸಾಲಮನ್ನಾ ಮೊತ್ತವನ್ನು ನೀಡುತ್ತಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com