ನಡೆದಿರುವ ಘಟನೆಯಲ್ಲಿ ಮಾರಕಾಸ್ತ್ರಗಳು ಬಳಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇದು ಜಾಮೀನು ನೀಡಬಹುದಾದ ಪ್ರಕರಣವಾಗಿದೆ ಎಂದು ವಿಜಯ್ ಪರ ವಾದ ಮಂಡಿಸಿರುವ ವಕೀಲರು ಹೇಳಿದ್ದರು. ಆದರೆ ವಿಜಯ್ ಗೆ ಜಾಮೀನು ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಇದು ಗಂಭೀರ ಪ್ರಕರಣವಗಿದ್ದು ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ ಎಂದಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಆದೇಶವನ್ನು ಸೆ.26 ಕ್ಕೆ ಕಾಯ್ದಿರಿಸಿತ್ತು. ಈಗ ಪ್ರಕರಣದ 4 ಆರೋಪಿಗಳಿಗೆ ಜಾಮೀನು ನಿರಾಕರಿಸಲಾಗಿದೆ.