ಕಾಂಗ್ರೆಸ್ ಪಕ್ಷದ 'ಗಂಗಾಂಬಿಕಾ ಮಲ್ಲಿಕಾರ್ಜುನ' ಬಿಬಿಎಂಪಿಯ 52ನೇ ಮೇಯರ್ ಆಗುವ ಸಾಧ್ಯತೆ

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಜಯನಗರ ವಾರ್ಡಿನಿಂದ ಎರಡನೇ ಬಾರಿಗೆ ಕಾರ್ಪೋರೇಟರ್ ಆಗಿರುವ ಗಂಗಾಂಬಿಕಾ ಮಲ್ಲಿಕಾರ್ಜುನ ಮೇಯರ್ ಸ್ಥಾನದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ.
ಸಾಂದರ್ಭಿಕ  ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಜಯನಗರ ವಾರ್ಡಿನಿಂದ ಎರಡನೇ ಬಾರಿಗೆ ಕಾರ್ಪೋರೇಟರ್ ಆಗಿರುವ ಗಂಗಾಂಬಿಕಾ ಮಲ್ಲಿಕಾರ್ಜುನ  ಮೇಯರ್ ಸ್ಥಾನದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ.

ಬಿಜೆಪಿ ಸಂಖ್ಯಾಬಲದ ಕೊರತೆಯಿಂದಾಗಿ ತನ್ನ ಅಭ್ಯರ್ಥಿ ಯಾರೆಂಬುದನ್ನು ಘೋಷಿಸಿಲ್ಲ. ಆದರೆ, ನಾಮಪತ್ರ ಸಲ್ಲಿಸುವವರೆಗೂ ತನ್ನ ಅಭ್ಯರ್ಥಿ ಹೆಸರನ್ನು ಬಹಿರಂಗಪಡಿಸದಿರಲು ನಿರ್ಧರಿಸಿದೆ. ಒಂದು ವೇಳೆ ಗಂಗಾಂಬಿಕಾ ಗೆದ್ದರಿ ಬೆಂಗಳೂರಿನ 52 ನೇ ಮೇಯರ್ ಆಗಲಿದ್ದಾರೆ.

ಲಿಂಗಾಯಿತ ಸಮುದಾಯಕ್ಕೆ ಸೇರಿರುವ ಗಂಗಾಂಬಿಕಾ ಅವರನ್ನು ಹಿರಿಯ ಕಾಂಗ್ರೆಸ್ ನಾಯಕರಾದ ರಾಮಲಿಂಗಾರೆಡ್ಡಿ ಹಾಗೂ ಶ್ಯಾಮನೂರು ಶಿವಶಂಕರಪ್ಪ ಹಾಗೂ  ಅನೇಕ ಲಿಂಗಾಯತ ಮಠದ ಸ್ವಾಮೀಜಿಗಳು ಬೆಂಬಲಿಸಿದ್ದಾರೆ.

ಬಿಬಿಎಂಪಿ ಚುನಾವಣೆ ಸಂಬಂಧ ಕಾಂಗ್ರೆಸ್ ಪಕ್ಷದ ನಾಯಕರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ ಬಳಿಕ ಅಂತಿಮವಾಗಿ ಗಂಗಾಂಬಿಕಾ ಅವರನ್ನು ಮೇಯರ್ ಅಭ್ಯರ್ಥಿ ಎಂದು ಘೋಷಿಸಲಾಗಿದೆ.

ಇಬ್ಬರು ಕಾರ್ಪೋರೇಟರ್ ಗಳನ್ನು ಬಿಜೆಪಿ ಬಲವಂತವಾಗಿ ಕರೆದೊಯ್ದಿದಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದು, ಗಂಗಾಂಬಿಕಾ ಅವರೇ ಮೇಯರ್ ಹುದ್ದೆಯ ಕಾಂಗ್ರೆಸ್ ಅಭ್ಯರ್ಥಿ ಎಂದು ಹೇಳಿದರು.

ಈ ಮಧ್ಯೆ ಜೆಡಿಎಸ್ ಪಕ್ಷದಿಂದ ರಮಿಳಾ ಉಮಾಶಂಕರ್ ಅಥವಾ ಭದ್ರೇಗೌಡ  ಉಪಮೇಯರ್ ಆಗುವ ಸಾಧ್ಯತೆ ಇದೆ. ಇದು ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ತೀರ್ಮಾನಕ್ಕೆ ಬಿಟ್ಟ ವಿಚಾರವಾಗಿದೆ ಎಂದು ಶಾಸಕ ಗೋಪಾಲಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com