ಮಹದಾಯಿ ನದಿ ನೀರಿಗೆ ಹೋರಾಟ ಮುಂದುವರಿಯಲಿದೆ: ಡಿ ಕೆ ಶಿವಕುಮಾರ್

ಮಹದಾಯಿ ನ್ಯಾಯಾಧಿಕರಣ ನೀಡಿದ ತೀರ್ಪಿನಲ್ಲಿ ನೀರು ಹಂಚಿಕೆ ವಿಷಯವಾಗಿ ರಾಜ್ಯಕ್ಕೆ ...
ಮಹದಾಯಿ ನದಿ ನೀರು ಕುಡಿಯುತ್ತಿರುವ ಸಚಿವ ಡಿ ಕೆ ಶಿವಕುಮಾರ್
ಮಹದಾಯಿ ನದಿ ನೀರು ಕುಡಿಯುತ್ತಿರುವ ಸಚಿವ ಡಿ ಕೆ ಶಿವಕುಮಾರ್

ಬೆಳಗಾವಿ/ಹುಬ್ಬಳ್ಳಿ: ಮಹದಾಯಿ ನ್ಯಾಯಾಧಿಕರಣ ನೀಡಿದ ತೀರ್ಪಿನಲ್ಲಿ ನೀರು ಹಂಚಿಕೆ ವಿಷಯವಾಗಿ ರಾಜ್ಯಕ್ಕೆ ಸಿಗಬೇಕಾದ ನ್ಯಾಯ ಸಿಕ್ಕಿಲ್ಲ. ಮಹದಾಯಿ ನೀರು ಹಂಚಿಕೆ ವಿವಾದ ನ್ಯಾಯಾಧೀಕರಣ ತೀರ್ಪಿನಿಂದ ಸಮಾಧಾನವಾಗಿಲ್ಲ, ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಖಾನಾಪುರ ತಾಲೂಕಿನ ಕಣಕುಂಬಿ ಬಳಿಯ ಕಳಸಾ ನಾಲಾ ಪ್ರದೇಶಕ್ಕೆ ಭೇಟಿ ನೀಡಿದ ಅವರು ಕಾಮಗಾರಿಯ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಆದರೆ ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಮೊರೆ ಹೋಗಲಿದೆಯೇ ಎಂಬ ಬಗ್ಗೆ ಸ್ಪಷ್ಟವಾಗಿ ಉತ್ತರಿಸಲಿಲ್ಲ. ಮಹದಾಯಿ ನ್ಯಾಯಾಧಿಕರಣ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ.

ನಮಗೆ ಈ ತೀರ್ಪು ಸಮಾಧಾನ ತಂದಿಲ್ಲ ಎಂದು ಈಗಾಗಲೇ ರಾಜ್ಯ ಸರ್ಕಾರ ಸ್ಪಷ್ಟವಾಗಿ ಹೇಳಿದೆ.  ನಾವು ನ್ಯಾಯಾಧಿಕರಣದಿಂದ ಬಹಳಷ್ಟು ನಿರೀಕ್ಷೆ ಮಾಡಿದ್ದೆವು. ಮಹದಾಯಿ ನದಿ ವ್ಯಾಪ್ತಿಯ ಒಟ್ಟು 188.6 ಟಿಎಂಸಿ ನೀರಿನಲ್ಲಿ 48 ಟಿಎಂಸಿ ನೀರನ್ನು ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ. ಕರ್ನಾಟಕವು ಕಳಸಾ-ಬಂಡೂರಿಯಿಂದ 7.56 ಟಿಎಂಸಿ ನೀರು ಕೇಳಿತ್ತು. ಆದರೆ, 3.90 ಟಿಎಂಸಿ ಹಂಚಿಕೆಯಾಗಿದೆ.ಇದಕ್ಕೆ ಇನ್ನೂ ಒಂದೂವರೆ ತಿಂಗಳ ಕಾಲಾವಕಾಶ ಇದೆ. ಅಷ್ಟರಲ್ಲಿ ಕಾನೂನು ಹಾಗೂ ನೀರಾವರಿ ತಜ್ಞರ ಜೊತೆ ಸಮಾಲೋಚನೆ ನಡೆಸಿ ಮೇಲ್ಮನವಿ ಸಲ್ಲಿಸುವ ಕುರಿತು ತೀರ್ಮಾನ ಮಾಡಲಾಗುವುದು ಎಂದಷ್ಟೇ ಹೇಳಿದರು.

ಕರ್ನಾಟಕ 36.55 ಟಿಎಂಸಿ ಅಡಿ ನೀರನ್ನು ಕೇಳಿದ್ದು ಅದರಲ್ಲಿ 13.42 ಟಿಎಎಂಸಿ ಅಡಿ ನೀರು ಮಾತ್ರ ಸಿಕ್ಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com