ಸಿಗರೇಟ್, ತಂಬಾಕು ಉತ್ಪನ್ನ ಮಾರಾಟಕ್ಕೆ ವಿಶೇಷ ಅನುಮತಿ; ಅಕ್ರಮ ತಡೆಗೆ ಕ್ರಮ

ಸಿಗರೇಟು ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳು ವಿಶೇಷ ...
ಮಂಗಳೂರಿನಲ್ಲಿ  ಎ ದರ್ಜೆ ಅಧಿಕಾರಿಗಳಿಗೆ ವಸತಿ ಯೋಜನೆ ಉದ್ಘಾಟನೆ ಮಾಡಿದ ನಗರಾಭಿವೃದ್ಧಿ ಸಚಿವ ಯು ಟಿ ಖಾದರ್
ಮಂಗಳೂರಿನಲ್ಲಿ ಎ ದರ್ಜೆ ಅಧಿಕಾರಿಗಳಿಗೆ ವಸತಿ ಯೋಜನೆ ಉದ್ಘಾಟನೆ ಮಾಡಿದ ನಗರಾಭಿವೃದ್ಧಿ ಸಚಿವ ಯು ಟಿ ಖಾದರ್

ಮಂಗಳೂರು: ಸಿಗರೇಟು ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳು ವಿಶೇಷ ಅನುಮತಿಯನ್ನು ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯಿಂದ ಪಡೆದುಕೊಳ್ಳಬೇಕೆಂಬ ಹೊಸ ಕಾನೂನು ತರುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಯು ಟಿ ಖಾದರ್ ತಿಳಿಸಿದ್ದಾರೆ.

ಈ ಸಂಬಂಧ ಪ್ರಸ್ತಾವನೆ ಅಂತಿಮ ಹಂತದಲ್ಲಿದ್ದು ಶಾಲಾ, ಕಾಲೇಜುಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ತಪಾಸಣೆ ನಡೆಸುವುದು ಮತ್ತು ಕಾನೂನುಬಾಹಿರವಾಗಿ ಗಾಂಜಾಗಳ ಮಾರಾಟ ಹೆಚ್ಚಾಗುತ್ತಿರುವುದನ್ನು ತಡೆಯುವುದು ಇದರ ಉದ್ದೇಶವಾಗಿದೆ ಎಂದರು.

ಹೊಸ ಕಾನೂನಿನಡಿಯಲ್ಲಿ ಚಾಕಲೇಟ್ ಮತ್ತು ಇತರ ತಿನಿಸುಗಳನ್ನು ಮಾರಾಟ ಮಾಡುವ ಅಂಗಡಿಗಳು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಮಾಡುತ್ತಿರುವ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕಾನೂನು ಜಾರಿ ಸಂಸ್ಥೆಗಳಿಗೆ ದಾಳಿ ನಡೆಸಲು ಹೊಸ ಕಾನೂನು ನೆರವಾಗಲಿದೆ ಎಂದು ಹೇಳಿದರು.

ಅವರು ನಿನ್ನೆ ಮಂಗಳೂರಿನಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ ಪರಾಮರ್ಶೆ ಸಭೆಯಲ್ಲಿ ಮಾತನಾಡಿ, ತಾವು ಪ್ರತಿನಿಧಿಸುತ್ತಿರುವ ಮಂಗಳೂರಿನ ಉಳ್ಳಾಲ ವಿಧಾನಸಭಾ ಕ್ಷೇತ್ರದ ಸುತ್ತಮುತ್ತ ಶೈಕ್ಷಣಿಕ ಸಂಸ್ಥೆಗಳು ಅನೇಕ ಇದ್ದು ಈ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ಇತ್ತೀಚೆಗೆ ಕೇಳಿಬರುತ್ತಿದೆ. ಸಣ್ಣ ಅಂಗಡಿಗಳು ಗಾಂಜಾವನ್ನು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿವೆ ಎಂಬ ದೂರುಗಳು ಕೇಳಿಬರುತ್ತಿವೆ.

ಈ ನಿಟ್ಟಿನಲ್ಲಿ ವಿಶೇಷ ಅನುಮತಿ ಪಡೆಯುವ ಕಾನೂನು ಜಾರಿಗೆ ತರುವ ಸಾಧ್ಯತೆಯಿದ್ದು ಅದು ತಂಬಾಕು ಉತ್ಪನ್ನ ಮತ್ತು ಗಾಂಜಾದ ಅಕ್ರಮ ಮಾರಾಟವನ್ನು ತಡೆಗಟ್ಟಲಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com