ಪುರುಷರು ಕೂಡ ಶಬರಿಮಲೆ ತೀರ್ಪನ್ನು ಸ್ವಾಗತಿಸಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ನೀಡಿರುವ ...
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಕಾಂಗ್ರೆಸ್ ನಾಯಕ ಹಾಗೂ ಕಲಬುರಗಿ ಕ್ಷೇತ್ರದ ಸಂಸದ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ.

ಕಲಬುರಗಿಯಲ್ಲಿ ಅವರು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿ, ಕೇವಲ ಮಹಿಳೆಯರಲ್ಲದೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟಿರುವ ಪುರುಷರು ಕೂಡ ಸುಪ್ರೀಂ ಕೋರ್ಟ್ ನ ತೀರ್ಪನ್ನು ಸ್ವಾಗತಿಸಿದ್ದಾರೆ. ಭಾರತಕ್ಕೆ ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದ ನಂತರವೂ ಅಸ್ಪೃಶ್ಯತೆ ಮತ್ತು ತಾರತಮ್ಯ ದೇವಸ್ಥಾನಗಳು ಸೇರಿದಂತೆ ಹಲವು ಕಡೆಗಳಲ್ಲಿ ಇರುವುದು ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.

ರಾಮಜನ್ಮಭೂಮಿ ಬಗ್ಗೆ ಕೇಸಿನ ಬಗ್ಗೆ ಕೇಳಿದ ಪ್ರಶ್ನೆಗೆ ಖರ್ಗೆ, ಕಾಂಗ್ರೆಸ್ ಈ ದೇಶದ ನ್ಯಾಯಾಂಗ ವ್ಯವಸ್ಥೆ ಮೇಲಿ ನಂಬಿಕೆ ಇಟ್ಟುಕೊಂಡಿದೆ. ಈ ವಿವಾದ ನ್ಯಾಯಾಲಯದ ಮುಂದಿರುವುದರಿಂದ ಅದರ ಕುರಿತು ಮಾತನಾಡುವುದು ಸರಿಯಲ್ಲ. ಕಾಂಗ್ರೆಸ್ ನಾಯಕಿ ಹಾಗೂ ಚಿತ್ರನಟಿ ರಮ್ಯ ವಿರುದ್ಧ ಎಫ್ಐಆರ್ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ರಫೆಲ್ ಯುದ್ಧ ವಿಮಾನ ಒಪ್ಪಂದ ಕುರಿತು ಪ್ರಧಾನಿ ಮೋದಿಯವರ ಕಠಿಣ ವರ್ತನೆಯನ್ನು ಕಂಡು ಅವರು ಟ್ವೀಟ್ ಮಾಡಿದ್ದರು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com