ಮರಾಠ ಸಮುದಾಯದಂತೆ ಮೀಸಲಾತಿಗೆ ಒತ್ತಾಯ, ವೀರಶೈವ ಲಿಂಗಾಯತರ ಪ್ರತಿಭಟನೆ

ಮರಾಠ ಸಮುದಾಯಕ್ಕೆ ನೀಡಿರುವ ಮೀಸಲಾತಿ ಮಾದರಿಯಂತೆ ಕರ್ನಾಟಕದಲ್ಲಿರುವ ವೀರಶೈವ ಲಿಂಗಾಯಿತರಿಗೂ ಮೀಸಲಾತಿ ನೀಡುವಂತೆ ರಾಜ್ಯಸರ್ಕಾರವನ್ನು ಒತ್ತಾಯಿಸಿ ವೀರಶೈವ ಲಿಂಗಾಯತ ಸಮುದಾಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ
ಪ್ರತಿಭಟನೆ

ಕಲಬುರಗಿ:  ನೆರೆಯ ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ನೀಡಿರುವ  ಮೀಸಲಾತಿ ಮಾದರಿಯಂತೆ ಕರ್ನಾಟಕದಲ್ಲಿರುವ  ವೀರಶೈವ ಲಿಂಗಾಯಿತರಿಗೂ ಮೀಸಲಾತಿ ನೀಡುವಂತೆ ರಾಜ್ಯಸರ್ಕಾರವನ್ನು ಒತ್ತಾಯಿಸಿ  ವೀರಶೈವ ಲಿಂಗಾಯತ ಸಮುದಾಯವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.

ಕಲಬುರಗಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು  ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿ ಮಹಾರಾಷ್ಟ್ರದಲ್ಲಿ ಹಿಂದುಳಿದಿರುವ ಮರಾಠ ಸಮುದಾಯಕ್ಕೆ ಶೇಕಡ 16 ರಷ್ಟು ಮೀಸಲಾತಿ ನೀಡಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿರುವ ವೀರಶೈವ ಲಿಂಗಾಯಿತರಿಗೂ ಮೀಸಲಾತಿ ನೀಡಬೇಕು ಎಂದು  ಆಗ್ರಹಿಸಿದರು.

ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತ ಬೇಡ ಆದರೆ, ಮೀಸಲಾತಿ ಬೇಕಾಗಿದೆ. ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಸಮುದಾಯದವರನ್ನು ಗುರುತಿಸಿ ಮೀಸಲಾತಿ ನೀಡಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com