ಬಡವರಿಗೆ ಮೀಸಲು: ಲೋಕಸಭೆ ಚುನಾವಣೆ ನಂತರ ರಾಜ್ಯ ಕ್ಯಾಬಿನಟ್ ಚರ್ಚೆ

ಸಾಮಾನ್ಯ ವರ್ಗದ ಬಡವರಿಗೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇ. 10 ಮೀಸಲಾತಿ ನೀಡುವ ಕಾನುನನ್ನು ಕರ್ನಾಟಕ ಸರ್ಕಾರ ಇನ್ನೂ ಜಾರಿಗೆ ತಂದಿಲ್ಲ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಸಾಮಾನ್ಯ ವರ್ಗದ ಬಡವರಿಗೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಶೇ. 10 ಮೀಸಲಾತಿ ನೀಡುವ ಕಾನುನನ್ನು ಕರ್ನಾಟಕ ಸರ್ಕಾರ ಇನ್ನೂ ಜಾರಿಗೆ ತಂದಿಲ್ಲ. ಮೀಸಲು ಜಾರಿ ವಿಚಾರದಲ್ಲಿ ಸರ್ಕಾರದ ವಿಳಂಬ ನೀತಿಯನ್ನು ಬಿಜೆಪಿ ಖಂಡಿಸುತ್ತಿರುವ ಬೆನ್ನಲ್ಲೇ ಹಿರಿಯ ಅಧಿಕಾರಿಯೊಬ್ಬರು  ಚುನಾವಣೆ ನಂತರ ರಾಜ್ಯ ಸಚಿವ ಸಂಪುಟದ ಮುಂದೆ ಈ ವಿಚಾರ ಚರ್ಚೆಗೆ ಬರಲಿದೆ ಎಂದು ಹೇಳಿದ್ದಾರೆ.
ಇದರ ನಡುವೆ ಜೆಇಇ ಮತ್ತು ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗದ ಬಡವರಿಗೆ ಶೇ. 10 ಮೀಸಲಿಗೆ  ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ಅವಕಾಶ ನೀಡಿದೆ ಎಂದು ಕರ್ನಾಟಕ ಆರ್ಥಿಕವಾಗಿ ದುರ್ಬಲರ ಕಲ್ಯಾಣ ಸಂಘದ ಸಾಮಾಜಿಕ ಕಾರ್ಯಕರ್ತ ಬಾಬುಲಾಲ್ ಭಂಡಾರಿ ತಿಳಿಸಿದ್ದಾರೆ.
ಇದೇ ವೇಳೆ ಇಡಬ್ಲ್ಯುಎಸ್ ಪ್ರಮಾಣಪತ್ರಗಳನ್ನು ಕರ್ನಾಟಕದಲ್ಲಿ  ಇನ್ನೂ ನೀಡಿಲ್ಲ, ಇದರಿಂದ ಅರ್ಹ ವಿದ್ಯಾರ್ಥಿಗಳಿಗೆ ಶಿಕ್ಷಣ ಸೌಲಭ್ಯ ಪಡೆಯಲು ಆಗುತ್ತಿಲ್ಲ. ಇತರ ರಾಜ್ಯಗಳಲ್ಲಿ ಇಡಬ್ಲ್ಯುಎಸ್ ಪ್ರಮಾಣಪತ್ರ ವಿತರಣೆ ಮಾಡುತ್ತಿದ್ದರೂ ಕರ್ನಾಟಕ ಸರ್ಕಾರ ಮಾತ್ರ ಪ್ರಮಾಣಪತ್ರ ವಿತರಣೆ ವಿಳಂಬ ಮಾಡಿದೆ.ಇದರಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ"ಭಂಡಾರಿ ಆರೋಪಿಸಿದ್ದಾರೆ.
ಲೋಕಾಸಭೆ ಚುನಾವಣೆ ಮುಗಿದ ನಂತರ ಸಚಿವ ಸಂಪುಟವು ಮೀಸಲು ವಿಧೇಯಕದ ಜಾರಿ ವಿಚಾರ ಚರ್ಚೆಗೆ ತೆಗೆದುಕೊಳ್ಳಲಿದೆ ಎಂದು ದು ಕರ್ನಾಟಕ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ಹೇಳಿದರು. ಒಮ್ಮೆ ಸಂಪುಟ ತೀರ್ಮಾನ ನ್ತೆಗೆದುಕೊಂಡ ಬಳಿಕ ಆದೇಶ ಜಾರಿಯಾಗುವುದರ ಕುರಿತು ವಿವರಿಸಲಾಗುತ್ತದೆ. 10% ರಷ್ಟು ಮೀಸಲಾತಿ ಕೇಂದ್ರ ಸರ್ಕಾರದ ಹುದ್ದೆಗಳಿಗೆ ಮಾತ್ರವಲ್ಲದೆ ರಾಜ್ಯ ಸರ್ಕಾರಿ ಹುದ್ದೆಗಳಿಲ್ಲ ಎಂದು ಭಾಸ್ಕರ್ ಸ್ಪಷ್ಟಪಡಿಸಿದ್ದಾರೆ.
ಇದೇ ಜನವರಿಯಲ್ಲಿ ಕೇಂದ್ರ ಸರ್ಕಾರ ಸಂವಿಧಾನದ ತಿದ್ದುಪಡಿ ಮೂಲಕ ಸಾಮಾನ್ಯ ವರ್ಗದ ಬಡವರಿಗೆ ಶೇ. 10 ಮೀಸಲತಿ ಜಾರಿ ಮಾಡಿತ್ತು.
ಈ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಿದ್ದಾರೆ ಮತ್ತು ದೇಶದಲ್ಲಿ ಪ್ರತಿಯೊಬ್ಬರಿಗೂಇದು ಅನ್ವಯಿಸಲಿದೆ ಎಂದು ರಾಜ್ಯಸಭೆ ಸದಸ್ಯ ಮತ್ತು ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com